ಬಳ್ಳಾರಿ, ಮೇ 22: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರ ಶೇಖರ ಅವರು ನಗರದ ಬುಡಾ ಕಚೇರಿಯಲ್ಲಿ ಶುಕ್ರಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬುಡಾ ಆಯುಕ್ತ ಈರಪ್ಪ, ಎಇಇ ರವಿಶಂಕರ್,ಮ್ಯಾನೇಜರ್ ವೇಣುಗೋಪಾಲ್, ವಿವಿಧ ಸಮುದಾಯದ ಮುಖಂಡರು ಸೇರಿದಂತೆ ಅನೇಕರು ಇದ್ದರು.
ಅಧಿಕಾರ ಸ್ವೀಕರಿಸಿದ ನಂತರ ದಮ್ಮೂರು ಶೇಖರ್ ಅವರು ಬುಡಾ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡರು ಮತ್ತು ಮುಂದಿನ ಬುಡಾ ಕಾರ್ಯಚಟುವಟಿಕೆಗಳ ಕುರಿತು ಅಗತ್ಯ ಸಲಹೆ-ಸೂಚನೆಗಳನ್ನು ಇದೇ ಸಂದರ್ಭದಲ್ಲಿ ನೀಡಿದರು.ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ, 1987ರ ಕಲಂ 3(3)(ಎ) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಮ್ಮೂರ ಶೇಖರ ಅವರನ್ನು ಮುಂದಿನ ಮೂರು ವರ್ಷದ ಅವಧಿವರೆಗೆ ಅಥವಾ ಮುಂದಿನ ಆದೇಶದವರೆಗೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಸಕರ್ಾರದ ಅಧೀನ ಕಾರ್ಯದಶರ್ಿ ಸಿ.ಎಸ್.ಶಿವಕುಮಾರಸ್ವಾಮಿ ಅವರು ತಿಳಿಸಿದ್ದಾರೆ.