ಬೆಂಗಳೂರು, ಏ 23, ದೇಶಾದ್ಯಂತ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಕೀಯ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಖಂಡಿಸಿ ಇಂದು ಕರಾಳ ದಿನ ಆಚರಿಸಲಾಗುತ್ತಿದೆ.ಬೆಂಗಳೂರು ಮಧ್ಯಪ್ರದೇಶ, ಹೈದರಾಬಾದ್, ದೆಹಲಿ, ಮುಂಬೈ ಸೇರಿದಂತೆ ಹಲವು ಕಡೆ ವೈದ್ಯರ ಮೇಲೆ ಕಲ್ಲು ತೂರಾಟ, ಎಂಜಲು ಉಗುಳುವುದು, ಬಾಯಿಗೆ ಬಂದತೆ ನಿಂದನೆ ಮಾಡುವ ಕೆಲವು ಪ್ರಕರಣಗಳ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಕರೆ ಮೇರೆಗೆ ಇಂದು ವೈದ್ಯರು ಮುಖಕ್ಕೆ ಕಪ್ಪು ಪಟ್ಟಿ ಧರಿಸಿ ಕೆಲಸ ಮಾಡಲಿದ್ದಾರೆ. ಇತ್ತೀಚೆಗೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಕೊರೋನಾ ಸೋಂಕು ಪೀಡಿತರನ್ನು ಪರೀಕ್ಷೆಗೊಳಪಡಿಸಲು ಆಸಾ ಕಾರ್ಯಕರ್ತರು ಮುಂದಾದಾಗ ಅವರ ಮೇಲೆ ಸ್ಥಳೀಯರು ಸಾರ್ವಜನಿಕರು ಕಲ್ಲು ತೂರಾಟ ನಡೆಸಿ ಹಲ್ಲೆ ನಡೆಸಿರುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು . ಇದನ್ನು ಖಂಡಿಸುವ ಹಿನ್ನೆಲೆಯಲ್ಲಿ ಈ ಕರಾಳ ದಿನಾ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಸ್ಪಷ್ಟನೆ ನೀಡಿದೆ. ಈ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸರ್ಕಾರವೂ ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಅಂತಹವರಿಗೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸುವ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಸಹ ಮೂರು ವರ್ಷ ಜೈಲು ಶಿಕ್ಷೆ ವಿಧಿಸುವ ತೀರ್ಮಾನ ತೆಗೆದುಕೊಂಡಿದ್ದುಈ ಕುರಿತ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.