ಅಪಘಾತ ಭೀತಿಗೆ ಕಾರಣವಾದ ಕತ್ತಲೆ: ಹೈಮಾಸ್ಟ್ ದೀಪ ದುರಸ್ತಿಗೆ ಆಗ್ರಹ
Darkness posing accident risk: Demand for repair of high-mast light
ಕೊಲ್ಹಾರ 27: ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ಕಳೆದ ಆರು ತಿಂಗಳಿಂದ ಹೈಮಾಸ್ಟ್ ದೀಪಗಳು ಕಾರ್ಯನಿರ್ವಹಿಸದೆ ನಿಂತಿದ್ದು, ಕುಡಿಯುವ ನೀರಿಗಾಗಿ ಅಳವಡಿಸಿದ್ದ ಬೋರ್ವೆಲ್ಗಳೂ ದುರಸ್ತಿಯಾಗದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ ಗಣಗಿ ಆರೋಪಿಸಿದ್ದಾರೆ.
ಮಟ್ಟಿಹಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಾರ್ವಜನಿಕರ ಅನುಕೂಲಕ್ಕಾಗಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಅಳವಡಿಸಿದ್ದ ಹೈಮಾಸ್ಟ್ ದೀಪಗಳು ಹಾಗೂ ಕುಡಿಯುವ ನೀರಿನ ಬೋರ್ವೆಲ್ಗಳ ನಿರ್ವಹಣೆಯ ಕೊರತೆಯಿಂದಾಗಿ ಬಳಕೆಗೆ ಬಾರದಂತಾಗಿವೆ.
ಈ ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಶೀಘ್ರ ದುರಸ್ತಿ ಮಾಡುವ ಭರವಸೆ ಮಾತ್ರ ಸಿಕ್ಕಿದೆ, ಸಮಸ್ಯೆ ಪರಿಹಾರವಾಗಿಲ್ಲ” ಎಂದು ದೂರಿದರು.
ಮಟ್ಟಿಹಾಳ ಕ್ರಾಸ್ ಸಮೀಪದ ಕುಡಿಯುವ ನೀರಿನ ಬೋರ್ವೆಲ್ ಸುಮಾರು ಏಳು ತಿಂಗಳಿಂದ ಸ್ಥಗಿತಗೊಂಡಿದೆ. ಬೋರ್ವೆಲ್ನ ಹಾಳಾದ ಮೋಟಾರ್, ಪೈಪ್ ಮತ್ತು ಕೇಬಲ್ಗಳನ್ನು ತೆಗೆದುಹಾಕಲಾಗಿದ್ದರೂ, ಹೊಸ ವ್ಯವಸ್ಥೆ ಮಾಡದ ಕಾರಣ ಗ್ರಾಮಸ್ಥರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದರು.
ಗ್ರಾಮದ ವಿವಿಧೆಡೆ ಅಳವಡಿಸಿರುವ ಹೈಮಾಸ್ಟ್ ದೀಪಗಳ ನಿರ್ವಹಣೆ ಇಲ್ಲದೆ ಅವು ಕಾರ್ಯನಿರ್ವಹಿಸುತ್ತಿಲ್ಲ. ಬಾಗೇವಾಡಿ-ಮಲಘಾಣ-ಹಣಮಾಪುರ ಮಾರ್ಗಗಳ ಸಂಗಮವಾಗಿರುವ ಮಟ್ಟಿಹಾಳ ಕ್ರಾಸ್ನಲ್ಲಿ ರಾತ್ರಿ ವೇಳೆ ಕತ್ತಲೆ ಆವರಿಸುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದರು.
ರಾತ್ರಿ ವೇಳೆ ಪಾದಚಾರಿಗಳು, ಮಹಿಳೆಯರು, ಮಕ್ಕಳು ಹಾಗೂ ವಾಹನ ಸವಾರರಿಗೆ ಅಪಾಯ ಎದುರಾಗಿದ್ದು, ಅಪಘಾತಗಳ ಭೀತಿಯೂ ಹೆಚ್ಚಾಗಿದೆ. ಸಮಸ್ಯೆ ಹಲವು ತಿಂಗಳಿಂದ ಮುಂದುವರಿದಿದ್ದರೂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
“ಸಾರ್ವಜನಿಕರ ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಎರಡು ದಿನಗಳಲ್ಲಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ಶ್ರೀಕಾಂತ ಗಣಗಿ ಹೇಳಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಮುದ್ದಿನ್ ಅವರಿಗೆ ಕೂಡ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 