ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ದರೋಜಿ ಸ.ಹಿ.ಪ್ರಾ ಶಾಲೆ ಮಕ್ಕಳು
ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ದರೋಜಿ ಸ.ಹಿ.ಪ್ರಾ ಶಾಲೆ ಮಕ್ಕಳು
ಕಂಪ್ಲಿ 08: ಕ್ರೀಡಾ ಕೌಶಲ್ಯಗಳೊಂದಿಗೆ ಸಾಧನೆ ಮಾಡುವ ಮೂಲಕ ಶಾಲೆಗೆ ಕೀರ್ತಿ ತರುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗ್ರತೆವಹಿಸಬೇಕು ಎಂದು ಎಸ್ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು. ಸಮೀಪದ ಹೊಸ ದರೋಜಿ ಸ.ಹಿ.ಪ್ರಾ ಶಾಲೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಸನ್ಮಾನದ ಗೌರವ ಸಲ್ಲಿಸಿದ ನಂತರ ಮಾತನಾಡಿ, ಇತ್ತೀಚಿನ ದಿನಮಾನದಲ್ಲಿ ಮಕ್ಕಳು ಮೊಬೈಲ್, ಟಿ.ವಿ, ವಾಟ್ಸಾಪ್ ಕಡೆ ಗಮಹರಿಸಿದ್ದು, ಇದರಿಂದ ಶಿಕ್ಷಣ ಕುಂಠಿತವಾಗುತ್ತಿದೆ. ಆದ್ದರಿಂದ ಮಕ್ಕಳು ಶಿಕ್ಷಣದ ಕಡೆಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಾದ ಪ್ರಜ್ವಲ್, ವೀರೇಶ, ರೇಖಾ ಎನ್ನುವವರು ಜಿಲ್ಲಾ ಮಟ್ಟದ ಅಥ್ಲೇಟ್ ವಿಭಾಗದ ಗುಂಡು ಎಸೆತ, ಎತ್ತರ ಮತ್ತು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಬುಧವಾರ ಗೌರವಿಸಲಾಯಿತು. ಮುಖ್ಯ ಶಿಕ್ಷಕಿ ಆರ್.ಗೀತಾ, ಎಸ್ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ ಸೇರಿ ಶಿಕ್ಷಕರು, ಪಾಲಕರು ಗ್ರಾ.ಪಂ.ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅ.001: ಸಮೀಪದ ಹೊಸ ದರೋಜಿ ಸ.ಹಿ.ಪ್ರಾ ಶಾಲೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.