ಬೆಂಗಳೂರು, ಆ 21 ಕಾವೇರಿ ನದಿ ಪಾತ್ರದ ಜಲಾಶಯಗಳು ತುಂಬಿ ತುಳುಕುತ್ತಿರುವ ಸಂದರ್ಭದಲ್ಲೇ ನಾಡಿನ ಪ್ರಮುಖ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಗತ್ಯ ಸಿದ್ದತೆಗಳು ಯಶಸ್ವಿಯಾಗಿ ನಡೆಯುತ್ತಿವೆ.
ದಸರಾ ಮಹೋತ್ಸವದಲ್ಲಿ ಜಂಬೂಸವಾರಿ ಪ್ರಮುಖ ಆಕರ್ಷಣೆಯಾಗಿದ್ದು, ಇದರಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಗಜಪಯಣಕ್ಕೆ ಗುರುವಾರ ಚಾಲನೆ ಸಿಗಲಿದೆ.
ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 11 ಗಂಟೆಗೆ ಗಜಪಯಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಲೆಕ್ಸಾಂಡರ್ ತಿಳಿಸಿದ್ದಾರೆ.
ಅರ್ಜುನ, ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಈಶ್ವರ ಹಾಗೂ ವಿಜಯ ಆನೆಗಳು ಗಜಪಯಣದಲ್ಲಿ ಪಾಲ್ಗೊಳ್ಳಲಿವೆ ಎಂದು ಅವರು ಹೇಳಿದ್ದಾರೆ.