ದಸರಾ ಕ್ರೀಡಾಕೂಟಕ್ಕೆ ಚಾಲನೆ
Dasara Sports Meet Kicks Off
ರಾಯಬಾಗ 22: ಯುವ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಬಿಇಒ ಬಸವರಾಜಪ್ಪ ಆರ್. ಹೇಳಿದರು. ಮಂಗಳವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಧ್ವಜಾರೋಹಣ ನೆರವೇರಿಸಿ ಚಾಲನೆ ನೀಡಿ ಅವರು ಮಾತನಾಡಿದರು.
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರ ಕ್ರೀಡಾ ಕೋಟಾದಡಿ ಮೀಸಲಾತಿ ಸೌಲಭ್ಯ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸುವುದು ಮುಖ್ಯ. ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿವೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಾಲೂಕು ಅನುಷ್ಠಾನಾಧಿಕಾರಿ ಸಂಜೀವಕುಮಾರ ನಾಯಿಕ, ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಮಾಹಾವೀರ ಜಿರಗ್ಯಾಳ, ಎಲ್.ಬಿ. ಬಂಡಗರ, ಎಸ್.ಎಂ. ಜಮಾದಾರ, ವಿ.ಡಿ. ಉಪಾಧ್ಯೆ, ಎಸ್.ಎಸ್. ಗೆನ್ನೆನ್ನವರ, ಝೆಡ್.ಆರ್. ಮುಲ್ಲಾ, ಎಂ.ಡಿ. ಹುಲ್ಲೆನ್ನವರ, ಶ್ರೀಶೈಲ ಹೊಸೂರ, ನಾಗಿಣಿ ಕಾಂಬಳೆ ಸೇರಿದಂತೆ ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಇದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 