ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ದಸ್ತಗೀರ್ ಕಲಾದಗಿ ಅವಿರೋಧ ಆಯ್ಕೆ
Dastagir Kaladagi unanimously elected as Town Panchayat President
ಕೊಲ್ಹಾರ ಸೆ.21: ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ 15ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ದಸ್ತಗೀರ್ ಮಕ್ತುಂಸಾಬ್ ಕಲಾದಗಿ ಅವಿರೋಧವಾಗಿ ಆಯ್ಕೆಯಾದರು.
ಹಿಂದಿನ ಅಧ್ಯಕ್ಷ ಚನಮಲ್ಲಪ್ಪ ಗಿಡ್ಡಪ್ಪಗೋಳ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಉಳಿದ ಅವಧಿಗಾಗಿ ಚುನಾವಣೆ ನಡೆಸಲಾಯಿತು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ಸಂತೋಷ ಮಾಯಗೇರಿ ಕಾರ್ಯನಿರ್ವಹಿಸಿದರು. ಪಪಂ ಮುಖ್ಯಾಧಿಕಾರಿ ವೀರೇಶ ಹಟ್ಟಿ ಉಪಸ್ಥಿತರಿದ್ದರು.
ಅಧ್ಯಕ್ಷ ಸ್ಥಾನಕ್ಕೆ ದಸ್ತಗೀರ್ ಕಲಾದಗಿ ಹಾಗೂ 10ನೇ ವಾರ್ಡ್ ಸದಸ್ಯೆ ಯಾಸ್ಮೀನ್ಬಾನು ಮೈಬುಸಾಬ್ ಕಲಾದಗಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯುವ ಅವಧಿಯಲ್ಲಿ ಯಾಸ್ಮೀನ್ಬಾನು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದ ಹಿನ್ನೆಲೆಯಲ್ಲಿ ದಸ್ತಗೀರ್ ಕಲಾದಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.
ಬಿಜೆಪಿ ಮುಖಂಡರಿಂದ ವಿಜಯೋತ್ಸವ
ದಸ್ತಗೀರ್ ಕಲಾದಗಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಬಿಜೆಪಿ ಜಿಲ್ಲಾ ಮುಖಂಡ ಮಲ್ಲಿಕಾರ್ಜುನ ಬೆಳುಬ್ಬಿ ಹಾಗೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಸದಸ್ಯರೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ವಿಜಯೋತ್ಸವದಲ್ಲಿ ಭಾಗವಹಿಸಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ದಸ್ತಗೀರ್ ಕಲಾದಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ನಾಮಪತ್ರ ಹಿಂಪಡೆಯುವ ಬೆಳವಣಿಗೆ ಹಾಗೂ ಕೆಲ ಸದಸ್ಯರ ಗೈರುಹಾಜರಿ ಕುರಿತು ಸ್ಥಳೀಯ ರಾಜಕೀಯ ವಲಯದಲ್ಲಿ ಚರ್ಚೆ ನಡೆದಿದೆ. ಆದರೆ ಈ ಬೆಳವಣಿಗೆಗೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ರಾಜಕೀಯ ಹೇಳಿಕೆಗಳು ಹೊರಬಿದ್ದಿಲ್ಲ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 