15 ಹಳ್ಳಿಗಳ ಸೊಸೆಯಂದಿರು, ಯುವತಿಯರಿಗೆ 'ಕ್ಯಾಮೆರಾ ಫೋನ್' ಬಳಕೆ ನಿಷೇದ
Daughter-in-laws and young women in 15 villages banned from using 'camera phones'
ರಾಜಸ್ಥಾನ: ರಾಜಸ್ಥಾನದ ಜಲೋರ್ ಜಿಲ್ಲೆಯ ಗ್ರಾಮ ಪಂಚಾಯಿತಿಯೊಂದು ಜನವರಿ 26 ರಿಂದ 15 ಹಳ್ಳಿಗಳ ಸೊಸೆಯಂದಿರು ಮತ್ತು ಯುವತಿಯರು ಕ್ಯಾಮೆರಾ ಹೊಂದಿರುವ ಫೋನ್ ಬಳಕೆ ಮಾಡುವುದನ್ನು ನಿಷೇಧಿಸಿದೆ.
ಅಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳು ಅಥವಾ ನೆರೆಹೊರೆಯವರ ಮನೆಗೂ ಕೂಡಾ ಫೋನ್ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಬದಲಾಗಿ, ಸ್ಮಾರ್ಟ್ಫೋನ್ಗಳ ಬದಲಿಗೆ ಕೀಪ್ಯಾಡ್ ಫೋನ್ ಮಾತ್ರ ಬಳಸಲು ಅನುಮತಿ ನೀಡಲಾಗಿದೆ.
ಜಲೋರ್ ಜಿಲ್ಲೆಯ ಗಾಜಿಪುರ ಗ್ರಾಮದ 14 ಪತ್ತಿನ (ಉಪವಿಭಾಗ) ಅಧ್ಯಕ್ಷ ಸುಜ್ಞಾರಾಂ ಚೌಧರಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಚೌಧರಿ ಸಮುದಾಯದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಿಟಿಐ ಜೊತೆ ಮಾತನಾಡಿದ ಚೌಧರಿ, ಐವರು ಸಮುದಾಯದ ಸದಸ್ಯರು ಈ ತೀರ್ಮಾನ ತೆಗೆದುಕೊಂಡಿರುವುದಾಗಿ ತಿಳಿಸಿದರು.
ಸೊಸೆಯಂದಿರು ಮತ್ತು ಯುವತಿಯರು ಕರೆಗಾಗಿ ಕೀಪ್ಯಾಡ್ ಫೋನ್ಗಳನ್ನು ಬಳಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗೆ ಹೋಗುವ ಹುಡುಗಿಯರು ತಮ್ಮ ವ್ಯಾಸಂಗಕ್ಕೆ ಮೊಬೈಲ್ ಫೋನ್ಗಳ ಅಗತ್ಯವಿರುವಾಗ ಅದನ್ನು ಮನೆಯಲ್ಲಿ ಮಾತ್ರ ಬಳಸಬಹುದು. ಮದುವೆ, ಸಾಮಾಜಿಕ ಕಾರ್ಯಕ್ರಮಗಳು ಅಥವಾ ನೆರೆಹೊರೆಯವರ ಮನೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗಲು ಅವರಿಗೆ ಅನುಮತಿ ಇಲ್ಲ ಎಂದು ಚೌಧರಿ ವಿವರಿಸಿದರು.
ಪಂಚಾಯತ್ನ ನಿರ್ಧಾರದ ಬಗ್ಗೆ ಕೇಳಿಬರುತ್ತಿರುವ ವಿರೋಧಕ್ಕೆ ಪ್ರತಿಕ್ರಿಯಿಸಿದ ಚೌಧರಿ, ಮಕ್ಕಳು ತಮ್ಮ ಮನೆಗಳಲ್ಲಿ ಮಹಿಳೆಯರ ಮೊಬೈಲ್ ಫೋನ್ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದು ಅವರ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂಬ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಕೆಲವು ಮಹಿಳೆಯರು ತಮ್ಮ ದಿನನಿತ್ಯದ ಕೆಲಸಗಳತ್ತ ಗಮನಹರಿಸಲು ಮಕ್ಕಳಿಗೆ ತಮ್ಮ ಫೋನ್ಗಳನ್ನು ನೀಡುತ್ತಿದ್ದಾರೆ. ಇದೆಲ್ಲವನ್ನೂ ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 