ದಾವಣಗೆರೆ ಉಪಚುನಾವಣೆ ಉಸ್ತುವಾರಿ ಪರಶುರಾಮ್ ಕೆರೆಹಳ್ಳಿ ಚುನಾವಣೆ ಪ್ರಚಾರದಲ್ಲಿ ಭಾಗಿ

ದಾವಣಗೆರೆ ಉಪಚುನಾವಣೆ ಉಸ್ತುವಾರಿ ಪರಶುರಾಮ್ ಕೆರೆಹಳ್ಳಿ ಚುನಾವಣೆ ಪ್ರಚಾರದಲ್ಲಿ ಭಾಗಿ Davanagere by-election in-charge Parasuram Kerehalli participated in election campaign

ಕೊಪ್ಪಳ 08: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಮನೂರು ಶಿವಶಂಕರ​‍್ಪ ಅವರ ನಿಧನದಿಂದಾಗಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಅಲ್ಲಿನ ಪ್ರತಿ ವಾರ್ಡ್‌ ಗಳಲ್ಲಿ ಗಾಂಧಿನಗರ, ಅಂಬೇಡ್ಕರ್ ನಗರ, ಕಾಲೋನಿಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ ಎಸ್ ಸಿ ಘಟಕದ ಕೆಪಿಸಿಸಿ ಮಾಧ್ಯಮ ವಕ್ತಾರ ಹಾಗೂ ಎಸ್ ಸಿ ಘಟಕದ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಪರಶುರಾಮ್ ಕೆರೆಹಳ್ಳಿ ಭಾಗಿ.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿಯಾದ ಶ್ರೀಯುತ ಸಮರ್ಥ್‌ ಶಾಮನೂರು ಮಲ್ಲಿಕಾರ್ಜುನ್  ಶಿವಶಂಕರ​‍್ಪ ಅವರ ಪರವಾಗಿ ಪ್ರತಿ ವಾರ್ಡ್‌ ಗಾಂಧಿನಗರ, ಅಂಬೇಡ್ಕರ್ ನಗರ, ದುರ್ಗಮ್ಮ ಗುಡಿ, ಆಂಜನೇಯ ಬಡಾವಣೆ, ಕಾಲೋನಿಗಳಲ್ಲಿ ಮನೆ ಮನೆಗೆ ತೆರಳಿ ಪುರುಷರಲ್ಲಿ, ಯುವಕರಲ್ಲಿ, ಮಹಿಳೆಯರಲ್ಲಿ, ಮತಯಾಚನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಪಕ್ಷದ  ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಪರಶುರಾಮ್ ಕೆರೆಹಳ್ಳಿ ಮಾತನಾಡಿ ಶಾಮನೂರು ಶಿವಶಂಕರ​‍್ಪನವರು ಸದಾ ಜನರ ಮಧ್ಯೆ ಇದ್ದುಕೊಂಡು ದಾವಣಗೆರೆ ದಕ್ಷಿಣ ವಿಧಾನಸಭಾ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ.ಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಬಡವರ, ಕಾರ್ಮಿಕರ, ರೈತರ, ಹಿಂದುಳಿದ, ದಲಿತ ಅಲ್ಪಸಂಖ್ಯಾತ ಸಮುದಾಯದ ಏಳಿಗೆಗಾಗಿ ಶ್ರಮಿಸಿದ್ದಾರೆ. ದಾವಣಗೆರೆಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಾಮನೂರು ಶಿವಶಂಕರಪುರ ಮೊಮ್ಮಗನಾದ ಶ್ರೀಯುತ ಸಮರ್ಥ್‌ ಮಲ್ಲಿಕಾರ್ಜುನ್ ಶಾಮನೂರು ಅವರು ಖಂಡಿತ ಜಯಶೀಲರಾಗುತ್ತಾರೆಂದು ವಿಶ್ವಾಸ  ಇದೆ ಎಂದರು.ದಾವಣಗೆರೆ​‍್ಷಉಪಚುನಾವಣೆ  ಕಾರ್ಯಕ್ರಮದ ಪ್ರಚಾರಕ್ಕಾಗಿ ಉಸ್ತುವಾರಿಯನ್ನಾಗಿ ನೇಮಿಸಿ ಆದೇಶ ಮಾಡಿದ ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಸಾಹೇಬರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ಸಾಹೇಬ್ರು, ಹಾಗೂ ಎಸ್ ಸಿ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ಆರ್ ಧರ್ಮ ಸೇನಾ ರವರು,

ನನಗೆ ಸಹಕಾರ ನೀಡಿದ, ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ಎಸ್ ತಂಗಡಗಿ ಸಾಹೇಬರು, ಸನ್ಮಾನ್ಯ ಶ್ರೀ ರಾಯರೆಡ್ಡಿ ಸಾಹೇಬರು ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರದ  ಜನಪ್ರಿಯ ಶಾಸಕರು ಶ್ರೀ ಕೆ.ರಾಘವೇಂದ್ರ ಹಿಟ್ನಾಳ್ ಸಾಹೇಬ್ರು, ಜನಪ್ರಿಯ ಸಂಸದರಾದ ಶ್ರೀ ಕೆ.ರಾಜಶೇಖರ್ ಹಿಟ್ನಾಳ್ ಸಾಹೇಬರು, ಮಾಜಿ ಸಂಸದರಾದ ಸಂಗಣ್ಣ ಕರಡಿಗಜೀ ರವರು ಹಾಗೂ ಸಹಕಾರ ಮಾರ್ಗದರ್ಶನ ನೀಡಿದ, ಎಸ್ ಸಿ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀ ಗಾಳೆಪ್ಪ ಎಚ್ ಪೂಜಾರ್ ರವರು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಗೂಳಪ್ಪ ಹಲಗೇರಿ ರವರು, ಕೊಪ್ಪಳ ನಗರಸಭೆ ಮಾಜಿ ಅಧ್ಯಕ್ಷರಾದ ಅಮ್ಜದ್ ಪಟೇಲ್ ರವರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ವರಿಷ್ಠರಿಗೂ, ಹಿರಿಯ ಕಾಂಗ್ರೆಸ್ ಮುಖಂಡರು,ಯುವ ಕಾಂಗ್ರೆಸ್ ಮುಖಂಡರು, ಕಾಂಗ್ರೆಸ್ ಪಕ್ಷದ ಎಲ್ಲಾ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಎಸ್ ಸಿ ಘಟಕದ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು. ಇವರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು.