ಕೆ.ಎಚ್.ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ದಿನಾಚರಣೆ
Day celebration at K.H. Kabbur Technical Education Institute
ಲೋಕದರ್ಶನ ವರದಿ
ಧಾರವಾಡ 16 : ಜನತಾ ಶಿಕ್ಷಣ ಸಮಿತಿಯ ಕೆ.ಎಚ್.ಕಬ್ಬೂರ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ದಿನಾಂಕ 14-03-2026 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಕೀಲರಾದ ಗೀತಾಬಾಯಿ ಅವರು ಮಹಿಳಾ ಸಬಲೀಕರಣ ಹಾಗೂ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿನಿಯರಿಗೆ ಮಾರ್ಗದರ್ಶನ ಮಾಡಿದರು. ವೇದಿಕೆಯಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ವೇದಾವತಿ ಆರ್. ತಿವಾರಿ, ಪ್ರಾಕ್ಟರ್ ಪಿ. ಉಷಾದೇವಿ, ನಿವೃತ್ತ ಪ್ರಾಚಾರ್ಯರಾದ ಸರಳಾಬಾಯಿ, ಮಹಿಳಾ ಸಂಘದ ಕಾರ್ಯದರ್ಶಿ ಭಾಗ್ಯಶ್ರೀ ಕೆ. ಹಾಗೂ ವಿದ್ಯಾರ್ಥಿನಿ ಪ್ರತಿನಿಧಿ ಕುಮಾರಿ ಚೈತ್ರಾ ಬಮ್ಮಿಗಟ್ಟಿ ಉಪಸ್ಥಿತರಿದ್ದರು. ಕುಮಾರಿ ಸಂಜನಾ ಹಾಗೂ ಕುಮಾರಿ ಭಾಗ್ಯವಂತಿ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ವಿಜಯಲಕ್ಷ್ಮಿ ವಂದಿಸಿದರು. ಸಂಸ್ಥೆಯ ವಿವಿಧ ವಿಭಾಗಗಳ ಮಹಿಳಾ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 