ಗ್ರಾಮ ದೇವತೆಯ ಜಾತ್ರೆಯಲ್ಲಿ ಪ್ರಾಣಿ ಬಲಿ ತಡೆಗಟ್ಟಲು ದಯಾನಂದ ಸ್ವಾಮೀಜಿ ಆಗ್ರಹ
Dayananda Swamiji urges to prevent animal sacrifice at village deity fair
ಕೊಪ್ಪಳ 03: ಹೈ ಕೋರ್ಟ್ ಆದೇಶದ ಅನ್ವಯ ಜಿಲ್ಲೆ ಕುಷ್ಟಗಿ ತಾಲೂಕಿನ ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬರಗಿ ಯಲ್ಲಿ ದಿ, ಏಪ್ರಿಲ್ 4 ಮತ್ತು 5 ರಂದು ಜರುಗಲಿರುವ ಗ್ರಾಮದೇವತೆಯ ಜಾತ್ರಾ ಮಹೋತ್ಸವದಲ್ಲಿ ಹಾಗೂ ಜಿಲ್ಲೆಯ ಇತರ ಧಾರ್ಮಿಕ ಪ್ರದೇಶಗಳಲ್ಲಿ ನಡೆಯುವ ಪ್ರಾಣಿಗಳ ಬಲಿ ತಡೆಗಟ್ಟುವಂತೆ ಕೋರಿ, ಕರ್ನಾಟಕ ಸರ್ಕಾರ, ಕೊಪ್ಪಳ ಜಿಲ್ಲಾಡಳಿತಕ್ಕೆ ಮತ್ತು ಪೊಲೀಸ್ ಇಲಾಖೆಗೆ ಪ್ರಾಣಿ ದಯ ಸಂಘದ ಅಧ್ಯಕ್ಷ ರಾಗಿರುವ ಶ್ರೀ ದಯಾನಂದ ಸ್ವಾಮೀಜಿ ಸರಕಾರಕ್ಕೆ ಆಗ್ರಹ ಪಡಿಸಿದ್ದಾರೆ, ಈ ಕುರಿತು ಹೇಳಿಕೆ ನೀಡಿದ ಅವರು ಪ್ರಾಣಿ ಬಲಿ ತ್ಯಜಿಸಿ ಸಾತ್ವಿಕ ಪೂಜೆ ಸಲ್ಲಿಸುವಂತೆ ಭಕ್ತರಿಗೆ ಮನವಿ ಮಾಡಿಕೊಂಡು, ಜನರಲ್ಲಿ ಜಾಗೃತಿ ಮೂಡಿಸಿ ಕೂಡಲೇ ಕೊಪ್ಪಳ ಜಿಲ್ಲಾ ಆಡಳಿತ ಅಗತ್ಯ ಕ್ರಮ ಕೈಗೊಂಡು ಕಟ್ಟುನಿಟ್ಟಿಲ್ಲ ಸೂಚನೆ ಜಾರಿಗೊಳಿಸುವಂತೆ ಒತ್ತಾಯಿಸಿದ್ದಾರೆ,
ಈ ಸಂದರ್ಭದಲ್ಲಿ ಜಿಲ್ಲೆಯ ಇತರ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಕೋಣ - ಕುರಿ - ಕೋಳಿ - ಮೇಕೆ ಇತ್ಯಾದಿ ಯಾವುದೇ ಪ್ರಾಣಿಗಳ ಬಲಿಯಾಗದಂತೆ ರಾಜ್ಯ ಹೈ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರಾಣಿಬಲಿಗಳ ಪ್ರತಿಬಂಧಕ ಕಾಯ್ದೆ 1959, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ 2021ರ ಅಡಿಯಲ್ಲಿ ಕಟ್ಟುನಿಟ್ಟಿನ ಬಂದೋಬಸ್ತ್ ಕೈಗೊಳ್ಳಬೇಕೆಂದು ಕರ್ನಾಟಕ ಸರ್ಕಾರ, ಕೊಪ್ಪಳ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾ ಸಂಘ ಮತ್ತು ಬಸವಧರ್ಮ ಜ್ಞಾನ ಪೀಠದ ಅದ್ಯಕ್ಷರಾದ ದಯಾನಂದ ಸ್ವಾಮೀಜಿಯವರು ಮನವಿ ಮಾಡಿದ್ದಾರೆ. ಪ್ರಾಣಿಬಲಿಯು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು ಯಾವುದೇ ವಯಸ್ಸಿನ ಯಾವುದೇ ಪ್ರಾಣಿ ಅಥವಾ ಪಕ್ಷಿಗಳನ್ನು ಧರ್ಮ ಅಥವಾ ದೇವರ ಹೆಸರಲ್ಲಿ ಧಾರ್ಮಿಕ ಸ್ಥಳಗಳಲ್ಲಿ, ದೇವಾಲಯ - ಜಾತ್ರಾ ಪರಿಸರಗಳಲ್ಲಿ ಹತ್ಯೆ ಮಾಡುವಂತಿಲ್ಲ.
ಅಲ್ಲದೆ ಕೋಣ ಹತ್ಯೆ ಮಾಡಿದರೆ ಅಥವಾ ಬಲಿ ನೀಡಿದವರಿಗೆ 3 ರಿಂದ 7 ವರ್ಷಗಳ ವರೆಗಿನ ಜೈಲು ಶಿಕ್ಷೆ ಹಾಗೂ 50 ಸಾವಿರದಿಂದ 10 ಲಕ್ಷಗಳವರೆಗೆ ದಂಡ ವಿಧಿಸಬಹುದಾಗಿದೆ, ಅಲ್ಲದೆ ಪ್ರಾಣಿಬಲಿ ಮಹಾ ಪಾಪ ಕೃತ್ಯವಾಗಿದ್ದು ಧರ್ಮ ಮತ್ತು ದೈವತ್ವಕ್ಕೆ ಕಳಂಕಪ್ರಾಯವಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ದಯವಿಟ್ಟು ಕೋಣ ಅಥವಾ ಯಾವುದೇ ಪ್ರಾಣಿಗಳ ಬಲಿ/ಹತ್ಯೆ ಮಾಡದೆ ಅಹಿಂಸಾತ್ಮಕವಾಗಿ ಸಾತ್ವಿಕ ರೀತಿಯಲ್ಲಿ ಹಬ್ಬ/ಜಾತ್ರೆಯನ್ನು ಆಚರಿಸಬೇಕು ಎಂದು ಭಕ್ತರು ಮತ್ತು ದೇವಾಲಯ-ಜಾತ್ರಾ ಸಮಿತಿಯವರನ್ನು ವಿನಂತಿಸಿದ್ದಾರೆ.ಪ್ರಾಣಿಬಲಿ ತಡೆ ಜಾಗೃತಿಗಾಗಿ ಅಹಿಂಸಾಪ್ರಾಣಿ-ದಯಾ-ಆಧ್ಯತ್ಮ ಸಂದೇಶ ಯಾತ್ರೆ*:ಪ್ರಾಣಿಬಲಿಯು ಅನಾಗರೀಕವು ಅಂಧಶ್ರದ್ಧೆಯೂ, ಪರಿಸರ ಮಾಲಿನ್ಯಕಾರಕ ಆಗಿದ್ದು ಇದು ಕಾನೂನು ಮತ್ತು ಧರ್ಮ ವಿರೋಧಿ ಆಗಿದೆ, ಆದ್ದರಿಂದ ಭಕ್ತಾದಿಗಳು ಪ್ರಾಣಿಬಲಿ ತ್ಯಜಿಸಿ ಅಹಿಂಸಾತ್ಮಕವಾಗಿ ಸಾತ್ವಿಕ ಪೂಜೆ ಸಲ್ಲಿಸಬೇಕು,
ದೇವಾಲಯಗಳು ವಧಾಲಯಗಳಾಗದೆ ದಿವ್ಯಾಲಯವಾಗಬೇಕು, ಜಾತ್ರಾ ಪರಿಸರಗಳ ಧಾರ್ಮಿಕ ಸ್ಥಾನಗಳು ಕಟುಕರ ಕೇರಿಗಳಾಗಬಾರದು, ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ರಕ್ತ, ಮೂಳೆ, ಮಾಂಸಗಳ ಆಗಾರವಾಗಬಾರದು, ಪ್ರಾಣಿಹಿಂಸೆ ಮತ್ತು ಮದ್ಯ - ಮಾದಕ ಪದಾರ್ಥಗಳಿಂದ ಮುಕ್ತವಾಗಿರಬೇಕು, ಅಹಿಂಸೆ ಕರುಣೆ, ಪ್ರೇಮ, ಜೀವದಯೆ, ಮಾನವೀಯತೆ, ಆಧ್ಯಾತ್ಮಿಕತೆ ಮುಂತಾದ ದಿವ್ಯ ಮೌಲ್ಯಗಳನ್ನು ಸಾರುವ ಸುಸಂಸ್ಕಾರ ನೀಡುವ ದಿವ್ಯ ಧಾಮಗಳಾಗಬೇಕು, ಸಧ್ಬಕ್ತಿ, ಸುಜ್ಞಾನ ಮತ್ತು ಸದಾಚಾರಗಳ ತ್ರಿವೇಣಿ ಸಂಗಮವಾಗಬೇಕು, ಈ ಹಿನ್ನೆಲೆಯಲ್ಲಿ ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ, ಕಬ್ಬರಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಹಾಗೂ ಜಾತ್ರಾ ಪರಿಸರ ಮತ್ತು ಸುತ್ತಮುತ್ತಲಿನ ಊರುಗಳಲ್ಲಿ ಅಹಿಂಸಾ-ಪ್ರಾಣಿ-ದಯಾ-ಅಧ್ಯಾತ್ಮ ಸಂದೇಶ ಯಾತ್ರೆಯನ್ನು ಕೈಗೊಳ್ಳಲಿದ್ದು ಇದಕ್ಕೆ ಸೂಕ್ತ ಭದ್ರತೆ ವದಗಿಸಬೇಕಾಗಿ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಯ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ಸರಕಾರಕ್ಕೆ ಒತ್ತಾಯಿಸಿದ್ದಾರೆ,
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 