ಡೇಂಗೀ ದಿನಾಚರಣೆ: ಜಾಗೃತಿ ಜಾಥಾ

ಬೆಳಗಾವಿ, ಮೇ 16 : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಿಮ್ಸ್ ಆಸ್ಪತ್ರೆ ಬೆಳಗಾವಿ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ಅಒಖ ಬೆಳಗಾವಿ, ಗ್ರಾಮ ಪಂಚಾಯತಿ ಸಾಂಬ್ರಾ, ಪ್ರಾಥಮಿಕ ಆರೋಗ್ಯಕೇಂದ್ರ ಮುತಗಾ ಇವರ ಸಂಯುಕ್ತಾಶ್ರಯದಲ್ಲಿ ಮೇ 16 ರಂದು ಸಾಂಬ್ರಾ ಗ್ರಾಮದಲ್ಲಿ ಡೇಂಗೀ ದಿನಾಚರಣೆಯ ಪ್ರಯುಕ್ತ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. 

ಜಾಥಾ ಕಾರ್ಯಕ್ರಮಕ್ಕೆ ಸಾಂಬ್ರಾ ರಕ್ಷಕ ಮಾಜಿ ಸೈನಿಕ ಸಂಘದ ಅಧ್ಯಕ್ಷರಾದ ಶ್ರೀ ಲಕ್ಷ್ಮಣ ಕಾವಾಸಪೂರ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳಾದ ಡಾ. ಎಂ.ಎಸ್.ಪಲ್ಲೇದ  ಮಾತನಾಡಿ ಡೆಂಗೀ ನಿಯಂತ್ರಣ ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಡೆಂಗಿ ರೋಗವು ಸೊಂಕಿತ ಇಡೀಸ್ ಸೊಳ್ಳೆ ಕಚ್ಚುವುದರಿಂದ ಬರುತ್ತಿದ್ದು ಈ ಸೊಳ್ಳೆಯು ಮನೆಯ ಒಳಗೆ ಶೇಖರಿಸಿದ ಸ್ವಚ್ಚ ನೀರಿನಲ್ಲಿ ಬೆಳೆಯುತ್ತಿರುವುದರಿಂದ ಪ್ರತಿ ಮೂರು ದಿನಕ್ಕೆ ನೀರನ್ನು ತೆಗೆದು ಸ್ವಚ್ಚಗೊಳಿಸಿ ಮತ್ತೆ ನೀರನ್ನು ತುಂಬಿ ಮುಚ್ಚಳ ಮುಚ್ಚಿ ಇಡುವುದರಿಂದ ಈ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು. 

ಯಾವದೇ ಜ್ವರ ಇದ್ದರೂ ಕೂಡಾ ತಕ್ಷಣ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆಯನ್ನು ಪಡೆಯುವದರಿಂದ ಸಾಂಕ್ರಾಮಿಕ ರೋಗಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ತಿಳಿಸಿದರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮುತಗಾ, ಸುಳೆಭಾವಿ ಆಶಾ ಮತ್ತು ಅಂಗನವಾಡಿ ಕಾರ್ಯಕತರ್ೆಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಆಶಾ ಕಾರ್ಯಕತರ್ೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಸರ್ಿಂಗ್ ವಿದ್ಯಾಥರ್ಿಗಳು ಭಾಗವಹಿಸಿದ್ದರು.