ಕಾರವಾರದಲ್ಲಿ ಸರಳ ಕನ್ನಡ ರಾಜ್ಯೋತ್ಸವ : ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ್
ಕಾರವಾರ : ಅಕ್ಟೋಬರ್ 17 : ಕೋವಿಡ್-19 ಕಾರಣದಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಸರಳ ರೀತಿಯಲ್ಲಿ ಹೆಚ್ಚು ಜನರು ಸೇರದಂತೆ ಸ್ವಾತಂತ್ರ್ಯ ದಿನಾಚರಣೆ ಮಾದರಿಯಲ್ಲಿಯೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಆಚರಿಸಲಾಗುವುದೆಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ್ ಹೇಳಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರುವ ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೊರೋನಾ ಸೊಂಕಿನಿಂದಾಗಿ ಈ ಸಲದ ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಾಂಕೇತಿಕ ವಾಗಿ ಕನ್ನಡಾಂಬೆಯ ಮೆರವಣಿಗೆ ನಡೆಸಲಾಗುವುದೆಂದರು.
ಈ ಬಾರಿ ಶಾಲಾ-ಕಾಲೇಜಿನ ಮಕ್ಕಳಿಗೆ ಪರೇಡ್‍ನಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ ಹಾಗೂ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ. ನವೆಂಬರ್ 5 ವರೆಗೂ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವರಿಂದ ಜನಪ್ರತಿನಿಧಿಗಳು ಭಾಗವಹಿಸುವುದು ಮತ್ತು ಸರ್ಕಾರದ ಸಾಧನೆ ಬಗ್ಗೆ ಭಾಷಣದಲ್ಲಿ ಪ್ರಸ್ಥಾಪಿಸುವ ಕುರಿತು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಸಿಬ್ಬಂಧಿ ಹಾಜರಿದ್ದರು.