ಬಾಗಲಕೋಟೆ03: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ವಿದ್ಯುತ್ ಹಾಗೂ ಶಾಲಾ ಕೊಠಡಿ ಸೇರಿದಂತೆ ಇತರೆ ಕಾಮಗಾರಿಗಳನ್ನು ಫೆ. 28 ರೊಳಗಾಗಿ ಪೂರ್ಣಗೊಳಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲೆಯ ನೆರೆ ಪ್ರವಾಹ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರವಾಹದಿಂದ ಹಾನಿಗೊಳಗಾದ ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಕೆಲವೊಂದು ಕಾಮಗಾರಿಗಳು ಮಾತ್ರ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಗಳು ಫೆಬ್ರವರಿ 28 ಕ್ಕೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿಯೊಂದು ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವ್ಯತ್ಯಾಸ ಕಂಡುಬಂದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಕಾರಜೋಳ ತಿಳಿಸಿದರು.
ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಆಗಸ್ಟ ಮಾಹೆಯಲ್ಲಿ ಸಂಭವಿಸಿದ ಪ್ರವಾಹದಿಂದ ಒಟ್ಟು 12013 ಮನೆಗಳು ಹಾನಿಗೊಳಾಗಿದ್ದು, ಅದರಲ್ಲಿ ಎ ಕೆಟಗರಿಯಲ್ಲಿ 576, ಬಿ ಕೆಟಗರಿಯಲ್ಲಿ 2638 ಹಾಗೂ ಸಿ ಕೆಟಗರಿಯಲ್ಲಿ 8801 ಮನೆಗಳು ಹಾನಿಗೊಳಗಾಗಿ ಒಟ್ಟು 200 ಕೋಟಿ ರೂ. ಹಾನಿಗೊಳಗಾವಿವೆ. ಈ ಪೈಕಿ ಎ ಮತ್ತು ಬಿ ವರ್ಗದ ಮನೆಗಳು ಸೇರಿ ಒಟ್ಟು 1084 ಮನೆಗಳಿಗೆ ಒಟ್ಟು 100 ಕೋಟಿ ರೂ. ಪರಿಹಾರ ವಿತರಿಸಲಾಗಿದ್ದು, ಮನೆ ಕಟ್ಟಲು ಪ್ರಾರಂಭಿಸಿದ್ದಾರೆ. ಉಳಿದ ಸಿ ವರ್ಗದ ಮನೆಗಳನ್ನು ಕಟ್ಟುಲು ಪ್ರಾರಂಭಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದರು.
ರಸ್ತೆ ಹಾನಿ ದುರಸ್ಥಿಗೆ ಒಟ್ಟು 839 ಕಾಮಗಾರಿಗೆ ಒಟ್ಟು 50 ಕೋಟಿ ರೂ.ಗಳಿಗೆ ಮಂಜೂರಾತಿ ನೀಡಲಾಗಿದೆ. 839 ಕಾಮಗಾರಿಗಳ ಪೈಕಿ 683 ಕಾಮಗಾರಿಗಳು ಪೂರ್ಣಗೊಂಡಿದ್ದು, 136 ಪ್ರಗತಿಯಲ್ಲಿವೆ. ಕೃಷಿ ಮತ್ತು ತೋಟಗಾರಿಕೆ ಸೇರಿದಂತೆ ಒಟ್ಟು 40594 ಕುಟುಂಬಗಳ ಬೆಳೆ ನಾಶವಾಗಿದ್ದು, ಈ ಪೈಕಿ 30,408 ಕುಟುಂಬಗಳಿಗೆ ಒಟ್ಟು 88 ಕೋಟಿ ರೂ. ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಹಾನಿಗೊಳಗಾದ ಕಾಮಗಾರಿಗಳಿಗೆ 23 ಕೋಟಿ ರೂ. ವೆಚ್ಚದಲ್ಲಿ 338 ಕಾಮಗಾರಿಗಳಿಗೆ ಮಂಜೂರಾತಿ ನೀಡಲಾಗಿದೆ. ಸೇತುವೆ, ಸಿಡಿ ಕೆಲಸ ಹಾಗೂ ರಸ್ತೆ ಕಾಮಗಾರಿಗಳಿಗೆ 28 ಕೋಟಿ ವೆಚ್ಚದಲ್ಲಿ 202 ಕಾಮಗಾರಿಗಳಿಗೆ ಮಂಜೂರಾತಿ ನೀಡಿದ್ದು, ಟೆಂಡರ್ ಪ್ರಕ್ರಿಯೇ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.
ಪ್ರಕೃತಿ ವಿಕೋಪ ನಿಧಿಯಿಂದ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ, ಸೇತುವೆ ಹಾಗೂ ಸಿಡಿ ಕೆಲಸಗಳು ಸೇರಿ ಒಟ್ಟು 46 ಕಾಮಗಾರಿಗಳಿಗೆ 51.46 ಕೋಟಿ ರೂ. ಮಂಜೂರಾತಿ ನೀಡಲಾಗಿದೆ. ಈ ಪೈಕಿ ಈಗಾಗಲೇ 15 ಕಾಮಗಾರಿಗಳು ಪೂರ್ಣಗೊಂಡಿದ್ದು, 27 ಪ್ರಗತಿಯಲ್ಲಿವೆ. ಒಂದು ಕಾಮಗಾರಿ ಮಾತ್ರ ಸರಕಾರ ಮಟ್ಟದಲ್ಲಿ ಉಳಿದಿರುವುದಾಗಿ ತಿಳಿಸಿದರು.
ಪ್ರವಾಸೋದ್ಯಮ ಇಲಾಖೆಯಿಂದ 14 ಪ್ರವಾಸಿ ಟ್ಯಾಕ್ಸಿಗಳು ಹಾಗೂ 2011 ರಿಂದ 2017 ವರೆಗೆ ಬಾಕಿ ಉಳಿದ 18 ಟ್ಯಾಕ್ಸಿ ಸೇರಿ ಒಟ್ಟು 32 ಟ್ಯಾಕ್ಸಿಗಳನ್ನು ಕೊಡಲಾಗುತ್ತಿದೆ. ಜಿಲ್ಲೆಯಲ್ಲಿ ಫೆಬ್ರವರಿ 27 ಮತ್ತು 28 ರಂದು ವಿದ್ಯಾಗಿರಿಯಲ್ಲಿರುವ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜ ಆವರಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಉದ್ಯೋಕಾಂಕ್ಷಿಗಳ ನೋಂದಣಿಗೆ ವೆಬ್ಸೈಟ್ www.bagalkoteudyogmela.com ಪ್ರಾರಂಭಿಸಲಾಗಿದ್ದು, ಈಗಾಗಲೇ 10565 ಉದ್ಯೋಗಾಕಾಂಕ್ಷಿಗಳು ವಿವಿಧ ಹುದ್ದೆಗಳಿಗೆ ನೊಂದಣಿ ಮಾಡಿಕೊಂಡಿರುವುದಾಗಿ ತಿಳಿಸಿದರು.
ಸಭೆಯಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಗರಿಮಾ ಪನ್ವಾರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದಶರ್ಿ ಎ.ಜಿ.ತೋಟದ, ಉಪವಿಭಾಗಾಧಿಕಾರಿಗಳಾದ ಎಂ.ಗಂಗಪ್ಪ, ಸಿದ್ದು ಹುಲ್ಲೊಳ್ಳಿ, ಜಂಟಿ ಕೃಷಿ ನಿದರ್ೇಶಕಿ ಚೇತನಾ ಪಾಟೀಲ, ನಗರಾಭಿವೃದ್ದಿ ಕೋಶದ ಯೋಜನಾ ನಿದರ್ೇಶಕ ಗಣಪತಿ ಪಾಟೀಲ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಶೀಘ್ರದಲ್ಲಿಯೇ ಮುಧೋಳದಲ್ಲಿ ಕೌಶಲ್ಯ ತರಬೇತಿ ಕೇಂದ್ರ
ಸಾರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರಾಜ್ಯದಲ್ಲಿ 4 ಹೊಸ ಕೌಶಲ್ಯ ತರಬೇತಿ ಕೇಂದ್ರ ಪ್ರಾರಂಭಿಸಲಾಗುತ್ತಿದ್ದು, ಈ ಪೈಕಿ ಬಾಗಲಕೋಟೆ ಜಿಲ್ಲೆಯ ಮುಧೋಳ ಹಾಗೂ ಅಥಣಿಯಲ್ಲಿ ಶೀಘ್ರದಲ್ಲಿಯೇ ಪ್ರಾರಂಭಿಸಲಾಗುತ್ತಿದೆ. ವಾಹನ ಚಾಲಕರ ಬೇಡಿಕೆ ಹೆಚ್ಚಿಗಿರುವದರಿಂದ ಈ ತರಬೇತಿ ಕೇಂದ್ರದ ಮೂಲಕ ನಿರುದ್ಯೋಗಿಗಳಿಗೆ ವಾಹನಾ ಚಾಲನಾ ತರಬೇತಿ ನೀಡುವದರ ಜೊತೆಗೆ ಅವರಿಗೆ ಲೈಸನ್ಸ್ ಸಹ ಉಚಿತವಾಗಿ ನೀಡಿ ಕೆಲಸ ಸಿಗುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.
- ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ