ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ: ಕ್ರಮಕ್ಕೆ ಆಗ್ರಹ
Deadly attack on cow protectors: call for action
ಬೀಳಗಿ 02: ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದಿಂದ ಮಂಗಳವಾರ ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ ಆನಂದ ಕೋಲ್ಹಾರ ರವರಿಗೆ ಮನವಿ ಸಲ್ಲಿಸಲಾಯಿತು
ಗೋ ರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದವರನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶಾಮ ಶಿಂಧೆ ಒತ್ತಾಯಿಸಿದರು.
ಬೆಳಗಾವಿ ಜಿಲ್ಲಾ ಹುಕ್ಕೇರಿ ತಾಲೂಕು ಇಂಗಳಗಿ ಗ್ರಾಮದಲ್ಲಿ ಜೂನ್ 27ರಂದು ಗೋ ರಕ್ಷಣೆಗೆ ಹೋದ 4 ಗೋ ಭಕ್ತರನ್ನು ಗ್ರಾಮದ ಕೆಲ ಗುಂಡಾಗಳು ರಾಕ್ಷಸರಂತೆ ವರ್ತಿಸಿ ತೆಂಗಿನಮರಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹೊಡೆದು ಕೊಲೆ ಮಾಡಲು ಪ್ರಯತ್ನಿಸಿದ ಘಟನೆ ಖಂಡಿಸಿ ಗೃಹ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಇಂತಹ ಅಮಾನವೀಯ ಘಟನೆ ನಡೆದಿದ್ದು ಅತ್ಯಂತ ನಾಚಿಕೆಗೇಡು. ನಾಗರಿಕ ಸಮಾಜ ತಲೆ ತಗ್ಗಿಸುವಂತ ಹೇಯ ಕೃತ್ಯವಾಗಿದೆ ಎಂದು ದೂರಿದರು.
ಶ್ರೀರಾಮ ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಮಲ್ಲಿಕಾರ್ಜುನ ಅಜ್ಜನವರು, ತಾಲೂಕು ಅಧ್ಯಕ್ಷ ಶಿವನಗೌಡ ಕಾನಗೌಡರ, ಪ್ರಧಾನ ಕಾರ್ಯದರ್ಶಿ ಬಸವರಾಜ ಚಿಮ್ಮಡ, ಸೋಮಯ್ಯ ಹಿರೇಮಠ, ಸುನಿಲ ಬಾಳಶೆಟ್ಟಿ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 