ಭೀಕರ ಸರಣಿ ಅಪಘಾತ: ಇಬ್ಬರ ಸಾವು

ವಿಜಯಪುರ, ಅ 17:     ಸರಣಿ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಲ್ಹಾರ ಬಳಿಯ ಕೃಷ್ಣಾ ನದಿ ಸೇತುವೆ ಮೇಲೆ ನಡೆದಿದೆ. ಲಾರಿಗೆ ಹಿಂಬದಿಯಿಂದ ಟಿಪ್ಪರ್, ಟಿಪ್ಪರ್ ಗೆ ಕಾರು ಡಿಕ್ಕಿಯಾಗಿ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ.  ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.  ಘಟನೆಗೆ ಸಂಬಂಧಿಸಿದಂತೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.