ಬೆಂಗಳೂರು, ಫೆ 27 :ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ವಿದ್ವಾಂಸ, ಶತಾಯುಷಿ ಸುಧಾಕರ ಚತುರ್ವೇದಿ ನಗರದಲ್ಲಿಂದು ನಿಧನರಾದರು. ಅವರಿಗೆ 127 ವರ್ಷ ವಯಸ್ಸಾಗಿತ್ತು.
ನಾಲ್ಕು ವೇದಗಳಿಗೂ ಭಾಷ್ಯ ಬರೆದು, ಚತುರ್ವೇದಿಗಳೆನಿಸಿದ್ದ ಇವರು ಸಾವಿರಾರು ಕ್ವಿಟ್ ಇಂಡಿಯಾ ಚಳುವಳಿಯ ಹುತಾತ್ಮ ಭಾರತೀಯರ ಅಂತ್ಯ ಸಂಸ್ಕಾರ ನಡೆಸಿದ್ದರು.
ತುಮಕೂರಿನ ಕ್ಯಾತಸಂದ್ರದಲ್ಲಿ ಜನಿಸಿದ ಚತುರ್ವೇದಿಯವರು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಪ್ರತ್ಯಕ್ಷದರ್ಶಿಯಾಗಿದ್ದರು. ನಂತರ ಮಹಾತ್ಮ ಗಾಂಧೀಜಿಯವರ ಒಡನಾಟದಲ್ಲಿದ್ದು , ಸ್ವಾತಂತ್ರ ಹೋರಾಟದಲ್ಲಿ ಸಕ್ರಿಯರಾಗಿ ಪಾಲ್ಗೊಂಡಿದ್ದರು.
ಇದರ ಜೊತೆಗೆ ವೇದಗಳ ಅಧ್ಯಯನದಲ್ಲಿ ತಮ್ಮನ್ನು ತೊಡಗಿಸಿಕೊಂಡು, ವೇದ ಪ್ರಚಾರಕ್ಕಾಗಿ 50ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.
ವೇದ ವಿದ್ವಾಂಸ ಸುಧಾಕರ ಚತುರ್ವೇದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲೆಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.