ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಾವು : ಭಾರತದಲ್ಲೇ ಹೆಚ್ಚು
ನವದೆಹಲಿ, ಅ 19 : ಜಾಗತಿಕ ಹಸಿವಿನ ಸೂಚ್ಯಂಕ ಪಟ್ಟಿಯಲ್ಲಿ ಭಾರತ ನೆರೆ ಹೊರೆಯ ದೇಶಗಳಿಗಿಂತಲೂ ಹೀನಾಯ ಸ್ಥಿತಿಯಲ್ಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದ ನಂತರ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಾವಿನ ಪ್ರಕರಣಗಳು ಭಾರತದಲ್ಲೇ ಹೆಚ್ಚಾಗಿ ಸಂಭವಿಸುತ್ತಿದೆ ಎಂಬ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ವಿಶ್ವದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಚ್ಚು ಮಕ್ಕಳ ಸಾವು ಭಾರತದಲ್ಲಿಯೇ ಸಂಭವಿಸುತ್ತಿದೆ ಎಂದು ಯುನಿಸೆಫ್ ವಿಶ್ವ ಮಕ್ಕಳ ಸ್ಥಿತಿಗತಿ ವರದಿ 2019 ತಿಳಿಸಿದೆ.
ಅಗತ್ಯ ಪೋಷಕಾಂಶಗಳ ಕೊರತೆಯಿಂದಾಗಿ ಮಕ್ಕಳು ಸಾವನ್ನಪ್ಪುತ್ತಿದ್ದು 2018 ನೇ ಸಾಲಿನಲ್ಲಿ ಪೋಷಕಾಂಶಗಳ ಕೊರತೆ ಮತ್ತು ಇನ್ನಿತರೆ ಕಾರಣಗಳಿಂದಾಗಿ ಭಾರತದಲ್ಲಿ 8.8 ಲಕ್ಷ ಮಕ್ಕಳು ಮೃತಪಟ್ಟಿರುವುದಾಗಿ ಯುನಿಸೆಫ್ ಮಕ್ಕಳ ವರದಿಯಲ್ಲಿ ಹೇಳಲಾಗಿದೆ.
ಇತ್ತೀಚೆಗಷ್ಟೇ ಜಾಗತಿಕ ಹಸಿವಿನ ಸೂಚ್ಯಂಕ ಪಟ್ಟಿಯನ್ನು ಯುನಿಸೆಫ್ ಬಿಡುಗಡೆ ಮಾಡಿತ್ತು. ಇದರಲ್ಲಿ ಭಾರತ 102 ನೇ ಸ್ಥಾನದಲ್ಲಿತ್ತು. ನೆರೆ ದೇಶಗಳಾದ ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾಕ್ಕೆ ಹೋಲಿಸಿದರೆ ಭಾರತದ ಸ್ಥಿತಿ ಹೀನಾಯವಾಗಿತ್ತು. ಹಸಿವಿನ ಪ್ರಮಾಣವೂ ಹೆಚ್ಚಾಗಿದೆ ಎಂಬುದು ಯುನಿಸೆಫ್ ವರದಿಯಿಂದ ಬೆಳಕಿಗೆ ಬಂದಿತ್ತು.
ಈಗ ಯುನಿಸೆಫ್ ಮಕ್ಕಳ ಸಾವಿನ ಸ್ಥಿತಿಗತಿಯ ವರದಿಯನ್ನು ಬಹಿರಂಗಪಡಿಸಿದೆ. ಈ ಅಪಾಯದಿಂದ ಪಾರಾಗಲು ಭಾರತ 2022 ರ ವೇಳೆಗೆ ಪೋಷಣ ಅಭಿಯಾನ ಯೋಜನೆಯನ್ನು ಸಮರ್ಪಕವಾಗಿ ಮತ್ತು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಇಲ್ಲದೇ ಹೋದಲ್ಲಿ ಈ ಯೋಜನೆಯ ಉದ್ದೇಶ ನಿರರ್ಥಕವಾಗುತ್ತದೆ ಎಂದು ವರದಿ ಹೇಳಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 