ನವದೆಹಲಿ, ಜೂನ್ 7,ಬ್ರೆಜಿಲ್ ನಲ್ಲಿ ಕೊರೊನಾ ವೈರಸ್ "ಕೋವಿಡ್-19" ಪ್ರಕರಣದಿಂದ ಸತ್ತವರ ಸಂಖ್ಯೆ 24 ಗಂಟೆಗಳಲ್ಲಿ 904 ಆಗಿದ್ದು, ಒಟ್ಟು ಮೃತರ ಸಂಖ್ಯೆ 35,930ಕ್ಕೇರಿದೆ. ಇದೇ ಅವಧಿಯಲ್ಲಿ 27,075 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ಒಂದು ದಿನದ ಹಿಂದೆ ಬ್ರೆಜಿಲ್ ನಲ್ಲಿ 30,830 ಪ್ರಕರಣ ದಾಖಲಾಗಿದ್ದು, 1,005 ಜನರು ಸಾವನ್ನಪ್ಪಿದ್ದರು. ಬ್ರೆಜಿಲ್ ನಲ್ಲಿ ಕೋವಿಡ್-19 ಪೀಡಿತರ ಸಂಖ್ಯೆ 6,72,846ಕ್ಕೇ ತಲುಪಿದೆ.
ಇದೇ ಅವಧಿಯಲ್ಲಿ 10,209 ರೋಗಿಗಳು ಚೇತರಿಸಿಕೊಂಡಿದ್ದಾರೆ. ಬ್ರೆಜಿಲ್ ವಿಶ್ವದಲ್ಲಿ ಅತಿ ಹೆಚ್ಚು ಪೀಡಿತರನ್ನು ಹೊಂದಿದ ಎರಡನೇ ರಾಷ್ಟ್ರವಾಗಿದೆ. ಅಮೆರಿಕ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದು, ಇಲ್ಲಿಯವರೆದ ಯು.ಎಸ್ ನಲ್ಲಿ 19 ಲಕ್ಷಕ್ಕೂ ಹೆಚ್ಚು ಜನರು ಈ ರೋಗಕ್ಕೆ ತುತ್ತಾಗಿದ್ದಾರೆ. ಮಾರ್ಚ್ 11 ರಂದು ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ವೈರಸ್ ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿತ್ತು. ಇಲ್ಲಿಯವರೆಗೆ, ವಿಶ್ವಾದ್ಯಂತ 68 ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದಾರೆ, ಮತ್ತು 399,000 ಕ್ಕೂ ಹೆಚ್ಚು ಸಾವುನೋವುಗಳು ಸಂಭವಿಸಿವೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.