ಮೈಸೂರು, ಅ 16: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುರಟ್ಟಿ ಗ್ರಾಮದಲ್ಲಿ ನಡೆದಿದೆ.
24 ವರ್ಷದ ಕೆ.ಪಿ.ನಂದೀಶ್ ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂದೀಶ್ ಅವರು ಸುಮಾರು 4.50 ಲಕ್ಷ ರೂ ಸಾಲ ಮಾಡಿಕೊಂಡಿದ್ದರು. ಬೆಳೆ ಕೈಗೆ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.