ದಶಕಗಳ ಹೋರಾಟಕ್ಕೆ ಸಿಕ್ಕ ಫಲ: ಪಟ್ಟಣದ ಹೊರ ಠಾಣೆ ಮೇಲ್ದರ್ಜೆಗೆ
Decades of struggle have paid off: Town's outpost upgraded
ಯರಗಟ್ಟಿ 19: ತಾಲೂಕಿನ ಜನರ ಹಾಗೂ ಕರವೇ, ರೈತ ಸಂಘ, ತಾಲೂಕು ಹೋರಾಟ ಸಮಿತಿ, ವಿವಿಧ ಸಂಘಟನೆಗಳ ದಶಕಗಳ ಹೋರಾಟಕ್ಕೆ ಸಿಕ್ಕ ಫಲ ಮೂರು ಜಿಲ್ಲೆಗಳ ಕೇಂದ್ರ ಸ್ಥಾನ, ವಾಣಿಜ್ಯ ವಲಯವಾಗಿರುವ ಯರಗಟ್ಟಿ ಪಟ್ಟಣದ ಹೊರ ಠಾಣೆಯನ್ನು ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಪ್ರಸ್ತಾಪಿತ ಯರಗಟ್ಟಿ ಠಾಣೆಗೆ ಪಿಐ-1, ಪಿಎಸ್‌ಐ-4, ಎಎಸ್‌ಐ-4, ಸಿಹೆಚ್‌ಸಿ-18 ಹಾಗೂ ಸಿಪಿಸಿ-36 ಒಟ್ಟು 65 ಹುದ್ದೆಗಳ ಅಧಿಕಾರಿ/ಸಿಬ್ಬಂದಿ ಬವಲವನ್ನು ಮಂಜೂರು ಮಾಡಿ ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿದೆ.
ಸವದತ್ತಿ ಮತ್ತು ಮುರಗೋಡೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳು ಗಣನೀಯವಾಗಿ ಏರಿಕೆ, ಜನಸಂಖ್ಯೆ ಕೂಡ ಹೆಚ್ಚಾಗಿವೆ. ಅಲ್ಲದೆ, ರೈತ ಪರ ಸೇರಿ ವಿವಿಧ ಸಂಘಟನೆಗಳ ನಿರಂತರ ಹೋರಾಟ, ಕಚೇರಿಗಳ ಮುತ್ತಿಗೆ ಹಾಕುತ್ತಿರುವ ನಿಯಂತ್ರಿಸುವ ನಿಟ್ಟಿನಲ್ಲಿ ಸವದತ್ತಿ ಪೊಲೀಸ್ ಠಾಣೆಯ ವ್ಯಾಪ್ತಿಯ 6 ಗ್ರಾಮಗಳು, ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯ 33 ಗ್ರಾಮಗಳನ್ನು ಸೇರಿಸಿ ಒಟ್ಟು 39 ಗ್ರಾಮಗಳನ್ನು ಒಳಗೊಂಡಂತೆ ಯರಗಟ್ಟಿ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಮತದಾರರಿಗೆ ಮಾತುಕೊಟ್ಟಂತೆ ಯರಗಟ್ಟಿ ಹೊರ ಠಾಣೆಯನ್ನು ಪೂರ್ಣ ಪ್ರಮಾಣದ ಪೊಲೀಸ್ ಠಾಣೆಯನ್ನಾಗಿ ಮೇಲ್ದರ್ಜೆಗೇರಿಸಿ ಮಾತು ಉಳಿಸಿಕೊಂಡಿದ್ದೇನೆ. ಈ ಭಾಗದ ಜನರ ದಶಕಗಳ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಕ್ಷೇತ್ರದ ಜನತೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ವಿಶ್ವಾಸ ವೈದ್ಯ, ಶಾಸಕರು ಸವದತ್ತಿ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 