ಡಿಸೆಂಬರ್ 23 ರಾಷ್ಟ್ರೀಯ ರೈತ ದಿನಾಚರಣೆ
December 23 National Farmers Day
ಬ್ಯಾಡಗಿ 22 : ಕೃಷಿ ಇಲಾಖೆ, ಬ್ಯಾಡಗಿ, ಕೃಷಿಕ ಸಮಾಜ ಬ್ಯಾಡಗಿ ಹಾಗೂ ಕೃಷಿ ವಿಜ್ಞಾನ ಕೇಂದ್ರ, ಹನುಮನಮಟ್ಟಿ ಸಹಭಾಗಿತ್ವದಲ್ಲಿ ಬ್ಯಾಡಗಿ ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಡಿ. 23 ರಂದು ಬೆಳಿಗ್ಗೆ 10ಗಂಟೆಗೆ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಹಾಗೂ ಕಿಸಾನ್ ಗೋಷ್ಠಿ ಹಮ್ಮಿಕೊಳ್ಳಲಾಗಿದೆ. ರೈತ ದಿನಾಚರಣೆ ಪ್ರತಿ ವರ್ಷ ಡಿಸೆಂಬರ್ 23ರಂದು ಆಚರಿಸಲಾಗುವ ರಾಷ್ಟ್ರೀಯ ದಿನವಾಗಿದ್ದು, ಭಾರತದ ಮಾಜಿ ಪ್ರಧಾನ ಮಂತ್ರಿ ಹಾಗೂ ರೈತನಾಯಕ ಶ್ರೀ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಸ್ಮರಣಾರ್ಥ ಆಚರಿಸಲಾಗುತ್ತಿದೆ. ಕಾರ್ಯಕ್ರಮವನ್ನು ಶಾಸಕರಾದ ಶ್ರೀ ಬಸವರಾಜ್ ನೀಲಪ್ಪ ಶಿವಣ್ಣನವರು ಉದ್ಘಾಟಿಸಲಿದ್ದಾರೆ.
ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ. ಸಿದ್ದಗಂಗಮ್ಮ ಕೆ.ಆರ್ ಹಿಂಗಾರು/ಬೇಸಿಗೆ ಬೆಳೆಗಳ ತಾಂತ್ರಿಕ ಮಾಹಿತಿ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.ಸದರಿ ಕಾರ್ಯಕ್ರಮಕ್ಕೆ ತಾಲೂಕಿನ ರೈತ ಬಾಂಧವರು, ಕೃಷಿಕ ಸಮಾಜದ ಪದಾಧಿಕಾರಿಗಳು, ರೈತ ಸಂಘದ ಪದಾಧಿಕಾರಿಗಳು, ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು , ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು, ಮಾಧ್ಯಮ ಮಿತ್ರರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಾಯಕ ಕೃಷಿ ನಿರ್ದೇಶಕರಾದ ಗಣೇಶ ಜೆ ಕಮ್ಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 