ಹುಕ್ಕೇರಿ ಹಿರೇಮಠದ ಶಾಖಾ ಮಠದ ದಶಮಾನೋತ್ಸವ ಹಾಗೂ ಜಾತ್ರಾಮಹೋತ್ಸವ
Decennial Celebration and Fair Festival of the Hukkeri Hiremath Branch Math
ರಾಯಬಾಗ 06: ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಮ್ಮಿಕೊಂಡಿರುವ ‘ಶ್ರೀಗಳ ನಡೆ ಶಿಷ್ಯರ ಕಡೆ’ ವಿನೂತನ ಕಾರ್ಯಕ್ರಮ ಸಂತಸದ ವಿಚಾರ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು. ಭಾನುವಾರ ಪಟ್ಟಣದ ಹುಕ್ಕೇರಿ ಹಿರೇಮಠದ ಶಾಖಾ ಮಠದಲ್ಲಿ ನಡೆದ ಶಾಖಾ ಮಠದ ದಶಮಾನೋತ್ಸವ ಹಾಗೂ ಜಾತ್ರಾಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಕ್ತರ ಕಲ್ಯಾಣಕ್ಕಾಗಿ ಶಾಖಾ ಮಠ ಸ್ಥಾಪಿಸಿ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಭಕ್ತರ ಮನೆಗಳಿಗೆ ತೆರಳಿ ಸನಾತನ ಧರ್ಮದ ಮಹತ್ವ ಸಾರುವುದರ ಜೊತೆಗೆ ಸಂಸ್ಕಾರ ನೀಡುವ ಕಾರ್ಯ ನಡೆಯುತ್ತಿದೆ ಎಂದರು. ಕೊಲ್ಲಾಪುರ ಜಿಲ್ಲಾ ಅಖಿಲ ಭಾರತ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಠಗಳು ಜ್ಞಾನ ಮತ್ತು ಭಕ್ತಿಯ ಜೊತೆಗೆ ಸಮಾಜಕ್ಕೆ ಮಾರ್ಗದರ್ಶನ ನೀಡುವ ಕೇಂದ್ರಗಳಾಗಿವೆ ಎಂದರು. ಪರಮಾನಂದವಾಡಿಯ ಗುರುದೇವ ಬ್ರಹ್ಮಾನಂದ ಆಶ್ರಮದ ಡಾ. ಅಭಿನವ ಬ್ರಹ್ಮಾನಂದ ಸ್ವಾಮೀಜಿ ಮಾತನಾಡಿ, ‘ಶ್ರೀಗಳ ನಡೆ ಶಿಷ್ಯರ ಕಡೆ’ ಅಭಿಯಾನದ ಮೂಲಕ ದೇಶದ ಸಂಸ್ಕೃತಿ, ಆಚಾರ-ವಿಚಾರಗಳನ್ನು ಜನರಿಗೆ ತಿಳಿಸುವ ಕಾರ್ಯ ನಡೆಯುತ್ತಿದೆ.
ಧಾವಂತ ಹಾಗೂ ಸ್ವಾರ್ಥದ ಜೀವನದತ್ತ ಆಕರ್ಷಿತರಾಗುತ್ತಿರುವ ಜನರು ನೆಮ್ಮದಿ ಕಳೆದುಕೊಳ್ಳುತ್ತಿದ್ದಾರೆ. ಮನುಷ್ಯರು ಆಧ್ಯಾತ್ಮಿಕತೆ ಮತ್ತು ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಮಠಗಳು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು. ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ವಕೀಲ ಶಿವಪ್ಪ ಕಿವಡಸನ್ನವರ ಅವರಿಗೆ ಸದ್ಭಾವನಾ ಪ್ರಶಸ್ತಿ ಹಾಗೂ ಮಹಾದೇವ ಬಿರಾದಾರ ಅವರಿಗೆ ಶಾಂತದುರ್ಗಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಳಿಗ್ಗೆ ಪಟ್ಟಣದ ಹನುಮಾನ ಮಂದಿರದಿಂದ ಶ್ರೀಮಠದವರೆಗೆ ಸುಮಂಗಲೆಯರಿಂದ ಕುಂಭಮೇಳ, ಅಡ್ಡಪಲ್ಲಕಿ ಉತ್ಸವ ಹಾಗೂ ದೇವರುಗಳ ಪಲ್ಲಕಿ ಮೆರವಣಿಗೆ ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರು, ಜನಪ್ರತಿನಿಧಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 