ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸದನದಲ್ಲಿ ನಿರ್ಣಯಿಸಿ :ಎಚ್ ಕೆ,ಪಾಟೀಲ್ ಆಗ್ರಹ
ಬೆಂಗಳೂರು,ಅ 11: ನೆರೆಯಿಂದ ಸಂಪೂರ್ಣ ಶಾಲೆಗಳು ಬಿದ್ದಿರುವ ಕಡೆಗಳಲ್ಲಿ ಶೈಕ್ಷಣಿಕ ವರ್ಷವನ್ನು ಮರುಪರಿಶೀಲನೆ ಮಾಡಿ ನಿಯಮ ತನ್ನಿ. ಇದೇನು ದೊಡ್ಡ ಕೆಲಸವಲ್ಲ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ ಶುಕ್ರವಾರ ವಿಧಾನಸಭೆಯಲ್ಲಿ ಸಲಹೆ ಮಾಡಿದರು.ಶೈಕ್ಷಣಿಕ ವರ್ಷವನ್ನು ಮರುಪರಿಶೀಲನೆ ಮಾಡಿ ಅದನ್ನು ಪ್ರವಾಹ ಪೀಡಿತ ಸ್ಥಳಗಳಲ್ಲಿ ಅದನ್ನು ವಿಸ್ತರಣೆ ಮಾಡಬೇಕು. ಇಲ್ಲವಾದರೆ ನಮ್ಮ ಮಕ್ಕಳು ಹಾಳಾಗಿ ಹೋಗುತ್ತವೆ ಎಂದು ಸಚಿವರು ಕಳವಳ ವ್ಯಕ್ತಪಡಿಸಿದರು.
ಶಾಲೆಗಳೇ ಇಲ್ಲದ ಮೇಲೆ ಮಕ್ಕಳು ಸುಮ್ಮನೆ ಓಡಾಡಿ ಹಾಳಾಗುವುದಿಲ್ಲವೇ? ಸರ್ಕಾರಕ್ಕೆ ಇದು ಅರ್ಥವಾಗುವುದಿಲ್ಲವೇ ಎಂದು ಕೇಳಿದರು.ಸಂಸದರಾದ ಪ್ರತಾಪಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡ ಅವರು ನೆರೆ ಬಗ್ಗೆ ಹೇಳಿದ್ದು ಇಡೀ ನಾಡು ನೋಡಿದೆ; ಹೀಗೆ ಮಾತನಾಡುವ ಸಂಸದ ಕೇಂದ್ರದಲ್ಲಿ ಪ್ರಧಾನಿ ಮೋದಿಯವರಿಗೆ ಏನು ಹೇಳಿರಬಹುದು ಲೆಕ್ಕಹಾಕಿ ಎಂದು ಖಂಡಿಸಿದರು.
ಜನರನ್ನು ಮಾನವೀಯ ದೃಷ್ಟಿಯಿಂದ ನೋಡದ ಸರ್ಕಾರ ಹೆದರಿ ಈ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ ಎಂದು ಟೀಕಿಸಿದರು. ಎಚ್.ಕೆ.ಪಾಟೀಲ ಸೇರಿದಂತೆ ಸರ್ವಪಕ್ಷಗಳ ಸದಸ್ಯರು ತಮ್ಮ ತಮ್ಮ ಭಾಗದ ಪ್ರವಾಹ ಪರಿಸ್ಥಿತಿಯನ್ನು ಬಿಚ್ಚಿಟ್ಟರು.ಈ ಭಾರಿ ಸಂಭವಿಸಿದ ಪ್ರವಾಹ ಹಾಗು ನೆರೆಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸದನ ನಿರ್ಣಯ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.ಪ್ರವಾಹ ಹಾಗೂ ನೆರೆ ಪರಿಹಾರ ಕಾರ್ಯವನ್ನು ಮೇಲ್ವಿಚಾರಣೆ ನಡೆಸಲು ಸರ್ಕಾರ ತಕ್ಷಣ ಜಂಟಿ ಸದನ ಸಮಿತಿ ರಚಿಸಬೇಕೆಂದು ಅವರು ಸರ್ಕಾರಕ್ಕೆ ಆಗ್ರಹಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 