ವಿಶ್ವಕರ್ಮ ಜಯಂತಿ ಸರಳ ಆಚರಣೆಗೆ ನಿರ್ಧಾರ

ಕೊಪ್ಪಳ 05: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಹಾಗೂ ವಿಶ್ವಕರ್ಮ ಜಯಂತಿಯನ್ನು ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಹೇಳಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಹಾಗೂ ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ಸೆ.05) ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

  ರಾಜ್ಯದಲ್ಲಿ ನೆರೆಹಾವಳಿಯ ಪರಿಣಾಮ ಜಯಂತಿ ಆಚರಣೆಗೆ ಮೀಸಲಿಟ್ಟ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡುವ ಕಾರಣದಿಂದ ನಿದರ್ೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಆದೇಶದಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸೆಪ್ಟೆಂಬರ್. 23 ರಂದು ಜಿಲ್ಲಾಡಳಿತ ಭವನದಲ್ಲಿ ಆಚರಿಸಲಾಗುವುದು. 

ವಿಶ್ವಕರ್ಮ ಜಯಂತಿಯನ್ನು ನೆರೆಹಾವಳಿ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಸರಳ ಆಚರಣೆಗೆ ಸಮಾಜದ ಮುಖಂಡರು ಸ್ವಯಂಪ್ರೇರಿತರಾಗಿ ಸಮ್ಮತಿಸಿದ ಕಾರಣ ವಿಶ್ವಕರ್ಮ ಜಯಂತಿಯನ್ನು ಕೂಡಾ ಜಿಲ್ಲಾಡಳಿತ ಭವನದಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು. ಜಯಂತಿ ಆಚರಣೆಯ ದಿನವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅವರು ಹೇಳಿದರು. 

ಸಭೆಯಲ್ಲಿ ತಹಶೀಲ್ದಾರ ಜೆ.ಬಿ ಮಜ್ಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಸಿದ್ದಲಿಂಗೇಶ ರಂಗಣ್ಣವರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ಕೃಷ್ಣಮೂತರ್ಿ ದೇಸಾಯಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರಾದ ಈಶಪ್ಪ ಬಡಿಗೇರ, ರಾಘವೇಂದ್ರ ಹೂಗೋಳ, ರುದ್ರಪ್ಪ ಬಡಿಗೇರ, ಶ್ರೀಶೈಲಪ್ಪ ಅಳವಂಡಿ, ಉಮೇಶ ಪತ್ತಾರ, ಶೇಖರಪ್ಪ ಬಡಿಗೇರ, ಮಂಜುನಾಥ ಬನ್ನಿಕೊಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.