ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್
Decision taken in preliminary meeting: Celebration of birth anniversaries of various dignitaries is
ಬಳ್ಳಾರಿ 20: ಜಿಲ್ಲಾಡಳಿತದಿಂದ ವಿವಿಧ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವೀಡೀಯೊ ಸಭಾಂಗಣದಲ್ಲಿ ಶುಕ್ರವಾರ ಏರಿ್ಡಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾ ಕೇಂದ್ರದಲ್ಲಿ ಜೂ.27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ನಿರ್ಧಾರ ಕೈಗೊಳ್ಳಲಾಯಿತು.
ಜೂ.27 ರಂದು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಚರಿಸಲಾಗುವುದು. ವೇದಿಕೆ ವ್ಯವಸ್ಥೆ ಮತ್ತು ಅಲಂಕಾರ, ಆಸನಗಳ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಇತರೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.ಕೆಂಪೇಗೌಡ ಜಯಂತಿ ಅಂಗವಾಗಿ ಭವ್ಯ ಮೆರವಣಿಗೆ ನಡೆಯಲಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಬೇಕು. ಮೆರವಣಿಗೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.ಜುಲೈ 02 ರಂದು ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 10 ರಂದು ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮಗಳನ್ನು ನಗರದ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ವಿವಿಧ ಮುಖಂಡರ ಸಮ್ಮುಖದಲ್ಲಿ ನಿರ್ಧರಿಸಲಾಯಿತು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರನ್ನನು ಆಹ್ವಾನಿಸಬೇಕು. ಮಹನೀಯರ ಸಾಧನೆ ಮತ್ತು ಕಾರ್ಯಗಳ ಬಗ್ಗೆ ಬಿತ್ತರಿಸಲು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಆಯೋಸಬೇಕು. ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ-ತಂಡಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.ಶಾಲೆ-ಪಿಯು ಕಾಲೇಜುಗಳಲ್ಲಿ ಕೆಂಪೇಗೌಡರ ಕುರಿತಾಗಿ ಪ್ರಬಂಧ, ಚಿತ್ರಕಲೆ, ಆಶುಭಾಷಣ, ವಿಚಾರಗೋಷ್ಠಿ ಮತ್ತು ಜಾಥಾ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ನಿರ್ದೇಶನವಿದ್ದು, ಇದಕ್ಕೆ ಬೇಕಾದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಡಿಡಿಪಿಐ ಅವರಿಗೆ ನಿರ್ದೇಶನ ನೀಡಿದರು.ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 