ಗಡಿಭಾಗದಲ್ಲಿ ಗಡಿನಾಡು ಕನ್ನಡಿಗರ ಸೇನೆಯ ಘಟಕಗಳ ಸ್ಥಾಪನೆಗೆ ನಿರ್ಧಾರ
Decision taken to establish units of the 'Gadinadu Kannadiga' army in border areas
ಲೋಕದರ್ಶನ ವರದಿ
ಬೆಳಗಾವಿ : ಬೆಳಗಾವಿ ದಕ್ಷಿಣ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ಸೇರಿದ ವಡಗಾವಿ, ಯಳ್ಳೂರು, ತಿಲಕವಾಡಿ, ಶಾಹಾಪುರ, ಮಚ್ಚೆ, ಸಾಂಬ್ರಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಗಡಿನಾಡು ಕನ್ನಡಿಗರ ಸೇನೆಯ ಹೊಸ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಭಾನುವಾರ ನಡೆದ ಗಡಿನಾಡು ಕನ್ನಡಿಗರ ಸೇನೆಯ ಜಿಲ್ಲಾ ಹಾಗೂ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಬಲರಾಮ ಮಾಸೇನಟ್ಟಿ, ಮರಾಠಿ ಪ್ರಾಬಲ್ಯವಿರುವ ಗ್ರಾಮಗಳಲ್ಲಿ ಕನ್ನಡ ಯುವಕರನ್ನು ಸಂಘಟಿಸಿ ಸೇನೆಯ ಘಟಕಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಮೊದಲ ಹಂತದಲ್ಲಿ ವಡಗಾವಿ ಮತ್ತು ಖಾಸಬಾಗ್ ಪ್ರದೇಶಗಳಲ್ಲಿ ಘಟಕಗಳನ್ನು ಆರಂಭಿಸಲಾಗುವುದು. ಬಳಿಕ ಇತರ ಪ್ರದೇಶಗಳಲ್ಲಿಯೂ ಕನ್ನಡ ಧ್ವಜಾರೋಹಣ ಕಾರ್ಯಕ್ರಮಗಳ ಮೂಲಕ ಹೊಸ ಘಟಕಗಳ ಉದ್ಘಾಟನೆ ನಡೆಸಲಾಗುವುದು ಎಂದು ಅವರು ಹೇಳಿದರು.
ಸಭೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ನಿರ್ಣಯಗಳಿಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಕನ್ನಡ ಸಂಘಟನೆಗಳು ಎರಡು ಸುತ್ತಿನ ಮಾತುಕತೆ ನಡೆಸಿರುವುದಾಗಿ ತಿಳಿಸಲಾಯಿತು. ಶೀಘ್ರದಲ್ಲೇ ಸಚಿವರನ್ನು ಮತ್ತೊಮ್ಮೆ ಭೇಟಿ ಮಾಡಿ ಪಾಲಿಕೆಯ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಇದೇ ವೇಳೆ, ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವುದನ್ನು ವಿರೋಧಿಸಿ ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ನಿರ್ಧಾರಕ್ಕೆ ಸಭೆಯು ಬೆಂಬಲ ವ್ಯಕ್ತಪಡಿಸಿತು.
ಸಭೆಯಲ್ಲಿ ಎಸ್.ಎಸ್. ಮೂಕನವರ, ಆನಂದ ಬಿಳಾವರ, ಸಂತೋಷ ಮಾಸೇನಟ್ಟಿ, ರಾಜ್ಯ ಘಟಕದ ಉಪಾಧ್ಯಕ್ಷೆ ಶ್ರೀಮತಿ ವಂದನಾ ಹೊರಕೇರಿ, ಅನು ಎಸ್.ಆರ್. ಸೇರಿದಂತೆ ಹಲವರು ಭಾಗವಹಿಸಿ ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ವ್ಯಕ್ತಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 