ಬಸವ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ
Decision to celebrate Basava Jayanti in grand style
ತಾಳಿಕೋಟಿ 16: ಕರ್ನಾಟಕ ಸಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ 20 ರಂದು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಇದಕ್ಕೆ ಎಲ್ಲರೂ ಸಹಕರಿಸಿ ಎಂದು ತಹಶೀಲ್ದಾರ್ ಡಾ.ವಿನಯಾ ಹೂಗಾರ ಹೇಳಿದರು. ಬುಧವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ ಸಮಾನತೆಯ ಕ್ರಾಂತಿಯನ್ನು ತಂದ ವಿಶ್ವಗುರು ಅಣ್ಣ ಬಸವಣ್ಣನವರ ಜಯಂತಿಯನ್ನು ಅತ್ಯಂತ ಸಂಭ್ರಮ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು.
ಏಪ್ರಿಲ್ 20 ರಂದು ಮುಂಜಾನೆ 8:30 ಘಂಟೆಗೆ ರಾಜವಾಡೆಯಿಂದ ಶ್ರೀ ಬಸವೇಶ್ವರರ ಭಾವಚಿತ್ರದ ಭವ್ಯ ಮೆರವಣಿಗೆ ಆರಂಭಿಸಲಾಗುವುದು. ಮೆರವಣಿಗೆ ಸಕಲ ವಾದ್ಯ ಮೇಳಗಳೊಂದಿಗೆ ಪಟ್ಟಣದ ಕತ್ರಿ ಬಜಾರ್, ಶಿವಾಜಿ ಸರ್ಕಲ್, ಮಹಾರಾಣಾ ಪ್ರತಾಪ್ ಸಿಂಹ ಸರ್ಕಲ್ ದಿಂದ ಬಸ್ ನಿಲ್ದಾಣದ ಮಾರ್ಗವಾಗಿ ಶ್ರೀ ಬಸವೇಶ್ವರ ವೃತ್ತಕ್ಕೆ ತಲುಪುವುದು. ನಂತರ ಅಲ್ಲಿಯೇ ವೇದಿಕೆ ಕಾರ್ಯಕ್ರಮ ಜರಗುವುದು. ಜಯಂತಿಯನ್ನು ಸರ್ಕಾರದ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಪಟ್ಟಣದ ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗುವುದು ಅಣ್ಣ ಬಸವಣ್ಣನವರ ತತ್ವಾದರ್ಶಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸಲು ಉಪನ್ಯಾಸ ಆಯೋಜಿಸಲಾಗುವುದು.
ಎಲ್ಲ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯುವಂತಾಗಲು ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು. ಶ್ರೀ ಬಸವೇಶ್ವರ ಉತ್ಸವ ಸಮಿತಿ ಅಧ್ಯಕ್ಷ ಮಹಾಂತೇಶ ಮುರಾಳ ಮಾತನಾಡಿ ಸಮಾನತೆಯ ಹರಿಕಾರರಾದ ವಿಶ್ವಗುರು ಬಸವಣ್ಣನವರ 893ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತಾಲೂಕ ಆಡಳಿತ ತೆಗೆದುಕೊಳ್ಳುವ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಸಮಾಜ ಬಾಂಧವರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ನೋಡಿಕೊಳ್ಳಬೇಕು. ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರನ್ನು ಸೇರಿಸಲು ಪ್ರಯತ್ನಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಗಣ್ಯರಾದ ಕಾಶಿನಾಥ ಮುರಾಳ, ಎಂ.ಎಸ್.ಸರಶಟ್ಟಿ,ಜಿ.ಜಿ. ಶರಣಗೌಡ ಪಾಟೀಲ,ಗಂಗಾಧರ ಕಸ್ತೂರಿ, ತಿಪ್ಪಣ್ಣ ಸಜ್ಜನ, ಪರಶುರಾಮ ತಂಗಡಗಿ, ರಾಜು ಸಜ್ಜನ, ಅಶೋಕ ಚಿನಗುಡಿ, ಎಂ.ಎಸ್. ನಾಗರಾಳ, ನಿಂಗಣ್ಣ ಕುಂಟೋಜಿ, ರವಿ ಚಂದುಕರ, ದತ್ತು ಉಬಾಳೆ,ಎಸ್.ಎಂ.ಪಾಲ್ಕಿ, ಲಂಕೇಶ ಪಾಟೀಲ, ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ.ದಮ್ಮೂರಮಠ, ಪಿಎಸ್‌ಐ ಎಸ್.ಎಂ.ಪಡಶೆಟ್ಟಿ, ತಾಪಂ ಸಹಾಯಕ ನಿರ್ದೇಶಕಿ ಸುಜಾತ ಯಡ್ರಾಮಿ, ಪುರಸಭೆ ಕಂದಾಯ ನೀರೀಕ್ಷಕ ಸುರೇಶ ಅಮರಣ್ಣವರ ಹಾಗೂ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 