ಮಹಾರಾಣಾ ಪ್ರತಾಪಸಿಂಹರ ಜಯಂತಿ ಆಚರಣೆಗೆ ನಿರ್ಧಾರ
Decision to celebrate Maharana Pratap Singh's birth anniversary
ಲೋಕದರ್ಶನ ವರದಿ
ಗದಗ 18 : ಜ್ಯೇಷ್ಠ ಶುದ್ಧ ತೃತೀಯಾ ದಿನವಾದ ಜೂನ್ 17 ರಂದು ಗದಗ ಬೆಟಗೇರಿ ರಜಪೂತ ಸಮಾಜದಿಂದ ರಾಷ್ಟ್ರ ವೀರ ಪುರುಷ ಮಹಾರಾಣಾ ಪ್ರತಾಪಸಿಂಹರ ಜಯಂತಿ ಆಚರಿಸಲು ರವಿವಾರದಂದು ಸಮಾಜದ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಯಿತು. ಅದರಂಗವಾಗಿ ಗದಗ ಬೆಟಗೇರಿ ರಜಪೂತ ಸಮಾಜದ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಹಾಗೂ ಅದರ ನಂತರದ ಇನ್ನಿತರ ಕೋರ್ಸ ಗಳಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು. ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಯಲ್ಲಿ ಉತ್ತೀರ್ಣರಾದವರು ಶ್ರೀ ಟಿ.ಜಿ. ಕಾಟೇವಾಲ ಹಾಗೂ ಇನ್ನಿತರ ಕೋರ್ಸಗಳಲ್ಲಿ ಉತ್ತೀರ್ಣರಾದವರು ಶ್ರೀ ಶೇಡುಸಿಂಗ್ ಜಮಾದಾರ ಅವರ ಕಡೆಗೆ ತಮ್ಮ ಅಂಕ ಪಟ್ಟಿಯ ಝರಾಕ್ಸ್ ಪ್ರತಿಗಳನ್ನು ನೀಡಿ ಹೆಸರು ನೋಂದಾಯಿಸಬೇಕೆಂದು ಗದಗ ಬೆಟಗೇರಿ ರಜಪೂತ ಸಮಾಜದ ಅಧ್ಯಕ್ಷ ಗಣೇಶಸಿಂಗ್ ಬ್ಯಾಳಿ ವಿನಂತಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 