ಆಗಸ್ಟ್ 09 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16ರಂದು ಶ್ರೀ ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
Decision to celebrate Sri Nuliyya Chandayya Jayanti on August 9th and Sri Krishna Jayanti on August
ಆಗಸ್ಟ್ 09 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16ರಂದು ಶ್ರೀ ಕೃಷ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
ವಿಜಯಪುರ, ಆಗಸ್ಟ್ 2: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 09ರಂದು ನುಲಿಯ ಚಂದಯ್ಯ ಜಯಂತಿ ಹಾಗೂ ಆಗಸ್ಟ್ 16ರಂದು ಶ್ರೀಕೃಷ್ಣ ಜನ್ಮ ದಿನದ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಉಪವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ತಿಳಿಸಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್ 09 ರಂದು ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಾಗೂ ಆಗಸ್ಟ್ 16ರಂದು ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ.
ಆಗಸ್ಟ್ 09 ರಂದು ಶ್ರೀ ನುಲಿಯ ಚಂದಯ್ಯ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊಂದಿಗೆ ಶ್ರೀ ನುಲಿಯ ಚಂದಯ್ಯ ಅವರ ಭಾವಚಿತ್ರದ ಮೆರವಣಿಗೆಗೆ ಚಾಲನೆ, ಬೆಳಿಗ್ಗೆ 10:30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಜಯಂತಿ ಕಾರ್ಯಕ್ರಮದಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಅಂದು ನಗರದ ಎಲ್ಲ ಮಹನೀಯರ ವೃತ್ತಗಳನ್ನು ಸ್ವಚ್ಛಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ವಿವಿಧ ಸಮಾಜ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 