ವಾಲ್ಮೀಕಿ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ
Decision to celebrate Valmiki Jayanti on a grand scale
ತಾಳಿಕೋಟಿ, 25 ; ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಅಕ್ಟೋಬರ್ 7ರಂದು ಆಚರಿಸಲ್ಪಡುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ತಾಲೂಕಾಡಳಿತದ ವತಿಯಿಂದ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಸಿಲ್ದಾರ್ ಡಾ.ವಿನಯಾ ಹೂಗಾರ ಹೇಳಿದರು.
ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತಂತೆ ಚರ್ಚಿಸಲು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಬಾರಿ ಜಯಂತಿ ಅಂಗವಾಗಿ ತಾಲೂಕಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಪಟ್ಟಣದಲ್ಲಿ ನಡೆಯಲಿದೆ. ಇದರ ಪೂರ್ವ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಹಾಗೂ ಅಂದಿನ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಲೋಪ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಜಿ.ಮಠ ಅವರು ಮಾತನಾಡಿ ತಾಲೂಕಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದಲ್ಲಿ ಅತಿ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು ಶಿಕ್ಷಣ ಇಲಾಖೆಯ ಮುಖ್ಯಸ್ಥರು ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ತಿಳಿಸಿದರು. ನಿಲಯ ಪಾಲಕ ಎನ್.ವಿ.ಕೋರಿ ಕಾರ್ಯಕ್ರಮದ ನಡಾವಳಿಗಳನ್ನು ಸಭೆಗೆ ತಿಳಿಸಿದರು.
ಸಭೆಯಲ್ಲಿ ಸ್ಥಳೀಯ ಠಾಣಾ ಪಿಎಸ್‌ಐ ಜ್ಯೋತಿ ಖೋತ್,ಬಿಇಓ ಬಿ.ಎಸ್.ಸಾವಳಗಿ, ಶಿರಸ್ತೆದಾರ ಜಿ.ಆರ್. ಜೈನಾಪೂರ, ಪುರಸಭೆ ಕಂದಾಯ ನೀರೀಕ್ಷಕ ಸುರೇಶ ಅಮರಣ್ಣವರ, ಆರೋಗ್ಯ ವೈದ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ, ಎಸ್.ಎಚ್.ಓ.ಫಿರೋಜ ಮುಲ್ಲಾ, ಸಾರಿಗೆ ಇಲಾಖೆಯ ಪ್ರಕಾಶ ಪಾಟೀಲ, ಇ.ಸಿ.ಓ.ಸುರೇಶ ಹಿರೇಮಠ, ಸಿ.ಆರಿ್ಸ.ರಾಜು ವಿಜಾಪುರ, ನಿಲಯ ಪಾಲಕರಾದ ಎಸ್.ಎನ್. ಮಲ್ಲಾಡೆ, ಎಸ್.ಎಂ.ಕಲಬುರ್ಗಿ. ಮಂಜು ನರಸಲಗಿ ಸೇರಿದಂತೆ ಪಟ್ಟಣದ ಗಣ್ಯರಾದ ಜಿ.ಜಿ.ಮದರಕಲ್ಲ, ನ್ಯಾಯವಾದಿ ಗಂಗಾಧರ ಕಸ್ತೂರಿ. ಮಂಜುನಾಥ ಶೆಟ್ಟಿ, ಸಮುದಾಯದ ಮುಖಂಡರಾದ ಲಕ್ಷ್ಮಣ್ ಕೊಡೆಕಲ್, ಕುಮಾರ ಅಸ್ಕಿ, ಸಂಜೀವಪ್ಪ ಬರದೇನಾಳ, ಕಾಶಿನಾಥ ಪಾಟೀಲ, ಅಶೋಕ ದೊರೆ, ಹಣಮಂತ್ರಾಯ ತಳ್ಳೊಳ್ಳಿ, ಮಲ್ಲಣ್ಣ ಅಸ್ಕಿ, ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ತಾಲೂಕಾಧ್ಯಕ್ಷ ಗೋಪಾಲ ಕಟ್ಟಿಮನಿ ಹಾಗೂ ಇತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 