ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
Decision to celebrate the birthday of the greats in a meaningful way
ವಿಜಯಪುರ 23:ಜಿಲ್ಲಾಡಳಿತದ ವತಿಯಿಂದ ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿ, ಜುಲೈ 2ರಂದು ಡಾ.ಪ.ಗು.ಹಳಕಟ್ಟಿ ಜನ್ಮದಿನಾಚರಣೆ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಜುಲೈ 10ರಂದು ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮಗಳನ್ನು ಅತ್ಯಂತ ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಯಿತು.
ಸೋಮವಾರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಹಾಗೂ ಜುಲೈ 2ರಂದು ಡಾ.ಪ.ಗು.ಹಳಕಟ್ಟಿ ಜನ್ಮದಿನಾಚರಣೆ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜುಲೈ 10ರಂದು ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಸಿದ್ದೇಶ್ವರ ದೇವಸ್ಥಾನದಿಂದ ವಿವಿಧ ಕಲಾ ತಂಡಗಳೊಂದಿಗೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆ ಹಾಗೂ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಏರಿ್ಡಸಲು ನಿರ್ಧರಿಸಲಾಯಿತು.
ಈ ಎಲ್ಲ ಜಯಂತಿ ಕಾರ್ಯಕ್ರಮಗಳಲ್ಲಿ ಮಹನೀಯರ ವಿಚಾರಧಾರೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಏರಿ್ಡಸಲು ನಿರ್ಧರಿಸಲಾಯಿತು. ಜಯಂತಿ ಅಂಗವಾಗಿ ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅಭಿಷೇಕ ಚಕ್ರವರ್ತಿ, ಸೋಮನಗೌಡ ಕಲ್ಲೂರ, ಎಂ.ಬಿ.ಕಟ್ಟಿಮನಿ, ಬಸವರಾಜ ಶಿವಶರಣರ ಸೇರಿದಂತೆ ವಿವಿಧ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 