ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜನೆಗೆ ತೀರ್ಮಾನ : ಅಧ್ಯಕ್ಷೆ ಕಾಂತಾ ನಾಯಕ
Decision to organize Belgaum division level job fair: President Kanta Nayak
ಲೋಕದರ್ಶನ ವರದಿ
ಧಾರವಾಡ 24: ಬೆಳಗಾವಿ ವಿಭಾಗ ಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡುವ ಕುರಿತು ಚರ್ಚೆ ಮಾಡಲಾಗುವುದು. ಅಧಿಕಾರಿಗಳು ಅವಶ್ಯಕ ಮಾಹಿತಿಯನ್ನು ನೀಡಿದರೆ ಶೀಘ್ರದಲ್ಲೇ ಉದ್ಯೋಗ ಮೇಳ ಆಯೋಜಿಸಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಅವರು ಹೇಳಿದರು. ಇಂದು (ಜೂ.24) ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹುಬ್ಬಳ್ಳಿ ಧಾರವಾಡ ನಗರಗಳು ಕೈಗಾರಿಕಾ ಮತ್ತು ವಿದ್ಯಾ ಕೇಂದ್ರಗಳಾಗಿವೆ. ಸಾಕಷ್ಟು ಕೈಗಾರಿಕೆಗಳು ಹುಬ್ಬಳ್ಳಿ ಧಾರವಾಡಗಳಲ್ಲಿವೆ. ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವುದು ಬಹಳ ಮುಖ್ಯವಾಗಿದೆ. ಅರ್ಹ ಅಭ್ಯರ್ಥಿಗಳು ಕೆಲಸ ಸಿಗದೇ ನಿರಾಶರಾಗಬಾರದು. ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಬೇಕು ಎಂದು ತಿಳಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 