ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು,ಕಾರ್ಯರೂಪಕ್ಕೆ ಬರಲಿ: ಸರ್ಕಾರಕ್ಕೆ ಎಚ್‌ಡಿಕೆ ಗುದ್ದು
ಬೆಂಗಳೂರು, ಮಾ.28, ಒಂದು ಸಾವಿರ ವೆಂಟಿಲೇಟರ್, 10 ಲಕ್ಷ ಎನ್95 ಮಾಸ್ಕ್, 5ಲಕ್ಷ ಕಿಟ್, 15ಲಕ್ಷ ತ್ರೀ ಲೇಯರ್ ಮಾಸ್ಕ್ ಖರೀಸುವುದಾಗಿ ಸರ್ಕಾರ ಹೇಳಿ ವಾರವಾಯ್ತು. ಒಂದು ವಾರದಲ್ಲಿ ಸೋಂಕು ತೀವ್ರಗತಿಯಲ್ಲಿ ಏರಿದೆ. ಆದರೆ ಸರ್ಕಾರ ಹೇಳಿರುವುದೆಲ್ಲವೂ ಕಾರ್ಯಗತವಾಗಿದೆಯೇ? ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಸೋಂಕಿನ ವಿರುದ್ಧ ಇಷ್ಟು ನಿಧಾನದ ಕಾರ್ಯಾಚರಣೆ ಸರಿಯೇ? ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಪ್ರೋತ್ಸಾಹ ಧನ ನೀಡುವಂತೆ ನಾನು ಕೋರಿದ್ದೆ.ಆದರೆ, ರಕ್ಷಣಾ ಕವಚವನ್ನೇ ನೀಡದಿರುವ ಬಗ್ಗೆ ಮಾಹಿತಿ ಇದೆ. ಜನ ರಸ್ತೆಗಳಿಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ.ಅವರಿಗೂ ಸೂಕ್ತ ರಕ್ಷಣಾ ಕವಚಗಳಿಲ್ಲ. ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಂತೆ ಪೊಲೀಸರಿಗೂ ರಕ್ಷಣಾ ಕವಚಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿದ್ದಾರೆ.ಕೊರೊನಾ ವೈರಸ್ ಕುರಿತ ಸುದ್ದಿಗಳನ್ನು ಮಾಧ್ಯಮಗಳಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳಿವೆ ಎಂದು ನಾನು ಮೊದಲೇ ಹೇಳಿದ್ದೆ. ಕೊರೊನಾ ನಿಯಂತ್ರಣದ ಜವಾಬ್ದಾರಿ ಒಬ್ಬ ಸಚಿವರ ಹೆಗಲಿಗೆ ವಹಿಸುವ ಮೂಲಕ ಆ ಮುಸುಕಿನ ಗುದ್ದಾಟ ಬಯಲಾಗಿದೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ಈ ಸಂದರ್ಭದಲ್ಲಿ ಪ್ರತಿಷ್ಠೆ ಮುಖ್ಯವಲ್ಲ ಎಂದು ಕುಟುಕಿದ್ದಾರೆ.ಸರ್ಕಾರ ಮೊದಲು ಹೆಚ್ಚಿನ ಪ್ರಮಾಣದಲ್ಲಿ ವೈದ್ಯಕೀಯ ಪರಿಕರಗಳನ್ನು ಹೊಂದಿಸಿಕೊಳ್ಳಬೇಕು.ವೈದ್ಯರಿಗೆ ಸೂಕ್ತ ಸವಲತ್ತುಗಳನ್ನು ನೀಡಬೇಕು.ಘೋಷಣೆಗಳು ಹೇಳಿಕೆಗಳು ಅಷ್ಟಕ್ಕೆ ಸೀಮಿತವಾಗಬಾರದು,ಕಾರ್ಯರೂಪಕ್ಕೆ ಬರಬೇಕು ಇಲ್ಲವಾದರೆ ಜಗತ್ತನ್ನೇ ಆವರಿಸಿರುವ ಮಹಾಮಾರಿ ಕರ್ನಾಟಕದಲ್ಲಿ ದೊಡ್ಡ ಪ್ರಮಾಣದಲ್ಲಿ "ಮರಣ ಮೃದಂಗ" ಬಾರಿಸುವ ಕಾಲ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 