ಗದಗ, ರೋಣ ಮತ್ತು ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ
Declare Gadag, Rona, and Mundaragi taluks as drought-affected taluks
ಲೋಕದರ್ಶನ ವರದಿ
ಗದಗ 21: ಗದಗ ಜಿಲ್ಲೆಯ ಗದಗ, ರೋಣ ಮತ್ತು ಮುಂಡರಗಿ ತಾಲೂಕುಗಳಲ್ಲಿ ಪ್ರಸಕ್ತ ಮುಂಗಾರು ( ಖರೀಫ್ ) ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿರುತ್ತಾರೆ. ಆದುದರಿಂದ ಗದಗ ಜಿಲ್ಲೆಯ ಮೂರು ತಾಲೂಕುಗಳನ್ನು ಘೋಷಿಸುವಂತೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.
ಈ ಕುರಿತಂತೆ ಸೆಪ್ಟೆಂಬರ್ 21 ರಂದು ಮುಖ್ಯಮಂತ್ರಿಗಳಿಗೆ ಮುಖ್ಯಮಂತ್ರಿಗಳಿಗೆ ಬರುವ ಪತ್ರ ಬರೆದಿರುವ ಅವರು, ಗದಗ ತಾಲೂಕಿನಲ್ಲಿ ಸಾಮಾನ್ಯ ಮಳೆ 304.7 ಮಿ.ಮೀ ಇದ್ದು ವಾಸ್ತವ ಮಳೆ 154.9 ಮಿ.ಮೀ ಇರುತ್ತದೆ. ಮುಂಡರಗಿ ತಾಲೂಕಿನಲ್ಲಿ ಸಾಮಾನ್ಯ ಮಳೆ 232.6 ಮಿ.ಮೀ ಇದ್ದು ವಾಸ್ತವ ಮಳೆ 120.9 ಮಿ.ಮೀ ಆಗಿದೆ. ರೋಣ ತಾಲೂಕಿನಲ್ಲಿ ಸಾಮಾನ್ಯ ಮಳೆ 338.0 ಮಿ.ಮೀ ಇದ್ದು ವಾಸ್ತವ ಮಳೆ 179.8 ಮಿ.ಮೀ ಆಗಿರುತ್ತದೆ ಎಂದು ಪತ್ರದಲ್ಲಿ ಗದಗ ಜಿಲ್ಲೆಯ ತಾಲೂಕಾವಾರು ಮಳೆಯ ಪ್ರಮಾಣವನ್ನು ವಿವರಿಸಿದ್ದಾರೆ.
ಗದಗ, ರೋಣ ಮತ್ತು ಮುಂಡರಗಿ ಮೂರು ತಾಲೂಕುಗಳಲ್ಲಿ ವಾಡಿಕೆ ಮಳೆಗೆ ಹೋಲಿಸಿದರೆ ಸುಮಾರು 47ಅ ರಿಂದ 49 ಅ ರಷ್ಟು ಮಳೆ ಕೊರತೆ ದಾಖಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರೂ ಕೂಡ ಅಗಸ್ಟ ತಿಂಗಳಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸ್ವತ: ರೈತರ ಜಮೀನುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ವೀಕ್ಷಣೆ ಮಾಡಿರುತ್ತಾರೆ. ಕೆಎಸ್‌ಎನ್‌ಡಿಎಂಸಿ ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ವೈಜ್ಞಾನಿಕವಾಗಿ ಮೇಲ್ವಿಚಾರಣೆ ಮಾಡುವ ಪ್ರಮುಖ ಸಂಸ್ಥೆಯಾಗಿದ್ದು ಅದರ ಮಳೆ ಮತ್ತು ಬರ ಸೂಚಕಗಳ ಮಾಹಿತಿಯನ್ನು ಸರ್ಕಾರದ ನಿರ್ಧಾರ ಪ್ರಕ್ರಿಯೆಯಲ್ಲಿ ಬಳಸಲಾಗುತ್ತದೆ.
ಗದಗ ಜಿಲ್ಲೆಯ ರೈತರ ಹೊಲಗಳಿಗೆ ಭೇಟಿ ನೀಡಿ ಮಾನ್ಯ ಮುಖ್ಯಮಂತ್ರಿಗಳೇ ಸ್ವತ: ಬೆಳೆ ಪರಿಸ್ಥಿತಿ ಮತ್ತು ಮಳೆ ಕೊರತೆಯಿಂದ ಉಂಟಾಗಿರುವ ಹಾನಿಯನ್ನು ಪರೀಶೀಲಿಸಿರುವುದು ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಗಳು ಸಹ ಸ್ಥಳೀಯ ಪರಿಸ್ಥಿತಿಯನ್ನು ಪರೀಶೀಲಿಸಿ ವಾಸ್ತವಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ಆದಾಗ್ಯೂ ಮೇಲಿನ ವಾಸ್ತವಾಂಶಗಳು ಮತ್ತು ರೈತರ ಸಂಕಷ್ಟದ ನಡುವೆಯೂ ಗದಗ, ರೋಣ, ಮುಂಡರಗಿ ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸುವ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ ಎಂಬುದು ರೈತರಲ್ಲಿ , ಗದಗ ಶಾಸಕರಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಯಾವುದೇ ರೀತಿಯ ವಿಳಂಬವಾದಲ್ಲಿ ರೈತರ ಅಸಮಾಧಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ರೈತರ ಹಿತದೃಷ್ಟಿಯಿಂದ ಹಾಗೂ ಸರ್ಕಾರದ ಮೇಲಿನ ಜನರ ವಿಶ್ವಾಸವನ್ನು ಕಾಪಾಡುವ ದೃಷ್ಟಿಯಿಂದ ಗದಗ, ರೋಣ ಮತ್ತು ಮುಂಡರಗಿ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರಡ್ಡಿ ಅವರು ಕೋರಿದ್ದಾರೆ.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 