ಗದಗ ಜಿಲ್ಲೆ ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ರೈತ ಸಂಘ ಆಗ್ರಹ
Declare Gadag district fully drought-hit: Farmers' association demands
ಗಜೇಂದ್ರಗಡ, ಆ.27: ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿ, ಜಿಲ್ಲೆಯ ಉಳಿದ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದ ಸರ್ಕಾರದ ಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ರವಿ ವಗ್ಗಣ್ಣವರ ತೀವ್ರವಾಗಿ ಖಂಡಿಸಿದ್ದಾರೆ.
ಗದಗ ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆಗಳು ಹಾನಿಗೊಳಗಾಗಿವೆ. ರೈತರ ಬದುಕು ದುಸ್ತರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಆಗ್ರಹಿಸಿದರು.
ಗಜೇಂದ್ರಗಡ ತಾಲೂಕನ್ನು ಮಾತ್ರ ಬರಪೀಡಿತ ಎಂದು ಘೋಷಿಸಿರುವುದು ಸರಿಯಲ್ಲ. ಜಿಲ್ಲೆಯ ಉಳಿದ ತಾಲೂಕುಗಳಲ್ಲಿಯೂ ಮಳೆ ಕೊರತೆ ಮತ್ತು ಬೆಳೆ ನಷ್ಟದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ವಾಸ್ತವ ಪರಿಸ್ಥಿತಿಯನ್ನು ಆಧರಿಸಿ ಗದಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಎಲ್ಲ ತಾಲೂಕುಗಳನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಪ್ರತಿ ಎಕರೆಗೆ ?50 ಸಾವಿರ ಪರಿಹಾರ ನೀಡಬೇಕು. ಸಮಗ್ರ ಹಾಗೂ ಪಾರದರ್ಶಕ ಬೆಳೆ ನಷ್ಟ ಸಮೀಕ್ಷೆ ನಡೆಸಿ, ಅರ್ಹ ಪ್ರತಿಯೊಬ್ಬ ರೈತನಿಗೂ ಪರಿಹಾರ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತರಿಗೆ ದೊರೆಯಬೇಕಾದ ಬೆಳೆ ವಿಮೆ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬರ ಪರಿಸ್ಥಿತಿಯಿಂದ ಜಾನುವಾರುಗಳಿಗೂ ಸಂಕಷ್ಟ ಎದುರಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಮೇವು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಬರದಿಂದ ಸಂಕಷ್ಟದಲ್ಲಿರುವ ರೈತರಿಗಾಗಿ ವಿಶೇಷ ಬರ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ರವಿ ವಗ್ಗಣ್ಣವರ ಒತ್ತಾಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 