ಇಂಡಿ ಬರಗಾಲ ಪೀಡಿತ ತಾಲೂಕು ಎಂದು ಘೋಷಸಿ: ಬಿ. ಡಿ ಪಾಟೀಲ
Declare Indi a drought-hit taluk: B. D. Patil
ಲೋಕದರ್ಶನ ವರದಿ
ಇಂಡಿ 13 : ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಅತಿ ಹಿಂದುಳಿದ ಪ್ರದೇಶವಾಗಿದ್ದು, ಪದೇಪದೇ ಬರಗಾಲಕ್ಕೆ ತುತ್ತಾಗುತ್ತಿದೆ. ಈ ವರ್ಷ ಜೂನ್ ತಿಂಗಳಲ್ಲಿ ಸಮರ್ಕ ಮಳೆಯಾಗದ ಕಾರಣ ಬಿತ್ತಿದ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಇಂಡಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿ, ಇಂಡಿ ತಾಲೂಕು ಪ್ರಾಂತ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.ಹಳೆಯ ತಹಶೀಲ್ದಾರ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದ ಮೂಲಕ ಮಿನಿ ವಿಧಾನಸೌಧದವರೆಗೆ ಸಾಗಿತು.
ಬಳಿಕ ಪ್ರತಿಭಟನಾಕಾರರು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಬಿ.ಡಿ. ಪಾಟೀಲ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿ, ಭೀಕರ ಬರಗಾಲದಿಂದ ರೈತರು ಜಾತಕ ಪಕ್ಷಿಯಂತೆ ಮಳೆಯ ನೀರೀಕ್ಷೆಯಲ್ಲಿದ್ದಾರೆ. ಆದರೆ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಸರ್ಕಾರಕ್ಕೆ ರೈತರ ಶಾಪ ತಟ್ಟಲಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಾಂತ ರೈತ ಸಂಘದ ಅಧ್ಯಕ್ಷ ಭೀಮರಾಯ ಪೂಜಾರಿ ಮಾತನಾಡಿ, "ಬರಗಾಲದಿಂದ ಸಂಕಷ್ಟಕ್ಕೊಳಗಾದ ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ಸೂಕ್ತ ಪರಿಹಾರ ನೀಡಬೇಕು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗದ ದಿನಗಳನ್ನು 200ಕ್ಕೆ ಹೆಚ್ಚಿಸಿ, ದಿನಗೂಲಿಯನ್ನು 600ಕ್ಕೆ ಏರಿಸಬೇಕು" ಎಂದು ಆಗ್ರಹಿಸಿದರು.ಹಸಿರು ಸೇನೆಯ ಅಧ್ಯಕ್ಷ ಮಾಳಪ್ಪ ಪೂಜಾರಿ ಮಾತನಾಡಿ, "ಬರದಿಂದ ನಷ್ಟಕ್ಕೊಳಗಾದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು. ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಸ್ಥಾಪಿಸಬೇಕು. ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಗಳನ್ನು ವಿತರಿಸಬೇಕು" ಎಂದು ಸರ್ಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಶ್ರೀಶೈಲ ಪೈಕಾರ, ಸಿದ್ದರಾಮ ಹಂಜಗಿ, ಮಲಪ್ಪ ಬಗಲಿ, ಮಲ್ಲು ಸಾವಕಾರ, ಶ್ರೀಮಂತ ದಳವಾಯಿ, ನಿಯಾಝ್ ಅಗರಖೇಡ, ಮಲಕಾರಿ ಪೂಜಾರಿ, ಸೈಪನ್ ಶೇಖ್, ಪುಂಡಲಿಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ 