ವಿಜಯನಗರ, ಬಳ್ಳಾರಿ ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಪರಿಹಾರ ನೀಡಿ: ಬಡಿಗೇರ್ ವೀರೇಶ್ ಒತ್ತಾಯ
Declare Vijayanagara and Ballari districts drought-hit and provide relief: Badiger Veeresh urges
ಲೋಕದರ್ಶನ ವರದಿ
ಕಂಪ್ಲಿ 28: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಬರ ಪರಿಹಾರ ಕಲ್ಪಿಸಬೇಕು ಎಂದು ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ಅಧ್ಯಕ್ಷ ಬಡಿಗೇರ್ ವೀರೇಶ್ ಒತ್ತಾಯಿಸಿದರು.
ಪಟ್ಟಣದಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಬಾರಿ ವಾಡಿಕೆಗಿಂತ ಮುಂಗಾರು ಮಳೆ ಸಂಪೂರ್ಣವಾಗಿ ಕಡಿಮೆಯಾಗಿರುವುದರಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಅನ್ನದಾತರ ಬದುಕು ಅತಂತ್ರ ಸ್ಥಿತಿಗೆ ತಲುಪಿದ್ದು, ಸರ್ಕಾರ ತಕ್ಷಣ ನೆರವಿಗೆ ಧಾವಿಸಬೇಕು ಎಂದು ಹೇಳಿದರು.
ತುಂಗಭದ್ರಾ ಜಲಾಶಯದಲ್ಲಿ ಈ ಬಾರಿ ನೀರಿನ ಸಂಗ್ರಹ ಪ್ರಮಾಣ ಕಡಿಮೆಯಾಗಿರುವುದರಿಂದ ಮುಂಗಾರು ಬೆಳೆಗಳಿಗೆ ನೀರಿನ ಕೊರತೆ ಎದುರಾಗುವ ಆತಂಕ ರೈತರಲ್ಲಿ ಮೂಡಿದೆ. ಕಂಪ್ಲಿ, ಕುರುಗೋಡು, ಸಿರುಗುಪ್ಪ ತಾಲೂಕು ಸೇರಿದಂತೆ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಉಂಟಾಗಿ ರೈತರು ಕಂಗಾಲಾಗಿದ್ದಾರೆ ಎಂದು ತಿಳಿಸಿದರು.
ಜನರು ಗುಳೆ ಹೋಗುವ ಪರಿಸ್ಥಿತಿ ಎದುರಾಗದಂತೆ ರಾಜ್ಯ ಸರ್ಕಾರ ಈ ಎರಡು ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ, ಅಗತ್ಯ ಬರ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ರೈತರ ಬದುಕಿಗೆ ಸರ್ಕಾರ ಆಸರೆಯಾಗಬೇಕು ಎಂದು ಅವರು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 