ಎಲ್ಲ 13 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ: ಎಎಪಿ ಆಗ್ರಹ

ಎಲ್ಲ 13 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ: ಎಎಪಿ ಆಗ್ರಹ  Declare all 13 taluks drought-hit: AAP demands


ವಿಜಯಪುರ 03 : ಜಿಲ್ಲೆಯ 13 ತಾಲೂಕುಗಳ ಪೈಕಿ ಕೇವಲ ವಿಜಯಪುರ, ನಿಡಗುಂದಿ ಹಾಗೂ ಕೊಲ್ಹಾರ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಉಳಿದ 10 ತಾಲೂಕುಗಳನ್ನು ಹೊರಗಿಟ್ಟಿರುವ ಸರ್ಕಾರದ ನಿರ್ಧಾರಕ್ಕೆ ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು, ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಎಂಟು ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ರೈತರ ಪರವಾಗಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು. ಎಲ್ಲ ತಾಲೂಕುಗಳಲ್ಲಿ ವೈಜ್ಞಾನಿಕ ಬೆಳೆಹಾನಿ ಸಮೀಕ್ಷೆ ನಡೆಸಿ, ಅರ್ಹ ರೈತರಿಗೆ ತಕ್ಷಣ ಪರಿಹಾರ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು-ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರ ನಿರ್ಧಾರ ಮರುಪರಿ ಶೀಲಿಸದಿದ್ದರೆ ರೈತರ ಪರವಾಗಿ ಹೋರಾಟ ತೀವ್ರ ಗೊಳಿಸುವುದಾಗಿ ಭೋಗೇಶ್ ಸೋಲಾಪುರ್ ಎಚ್ಚರಿಸಿದ್ದಾರೆ.