ಧಾರ್ಮಿಕ ಕಾರ್ಯಗಳಿಗೆ ಸಮಯ ಮೀಸಲಿಡಿ: ಶಾಸಕ ವಿಶ್ವಾಸ ವೈದ್ಯ
Dedicate time to religious activities: MLA Vishwas Vaidya
ಲೋಕದರ್ಶನ ವರದಿ
ಉಗರಗೋಳ 11: ಇಂದಿನ ಒತ್ತಡದ ಬದುಕಿನಲ್ಲೂ ಪ್ರತಿಯೊಬ್ಬರೂ ಸ್ವಲ್ಪ ಸಮಯವನ್ನು ಧಾರ್ಮಿಕ ಕಾರ್ಯಗಳಿಗೆ ಮೀಸಲಿಡಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಕರೆ ನೀಡಿದರು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಬುಧವಾರ ನಡೆದ ರುಕ್ಮಿಣಿ ಪಾಂಡುರಂಗ ದಿಂಡಿ ಉತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ಧರ್ಮಶಾಲೆ ಕಾಮಗಾರಿ ಮುಂದುವರಿಸಲು ಸ್ಥಳದಲ್ಲಿಯೇ 5 ಲಕ್ಷ ಅನುದಾನ ನೀಡುವುದಾಗಿ ಶಾಸಕ ವಿಶ್ವಾಸ ವೈದ್ಯ ಘೋಷಿಸಿದರು. ಅಲ್ಲದೆ ಕನಕ ಭವನ ನಿರ್ಮಾಣಕ್ಕೂ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಪಂಡರಾಪುರ ಯಾತ್ರೆಯ ಮಹತ್ವವನ್ನು ವಿವರಿಸಿದ ಅವರು, ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ನೂರಾರು ಕಿ.ಮೀ. ಕಾಲ್ನಡಿಗೆಯಲ್ಲಿ ಪಂಡರಾಪುರಕ್ಕೆ ತೆರಳುವುದು ವಿಠ್ಠಲನ ಮೇಲಿನ ಭಕ್ತಿಗೆ ಸಾಕ್ಷಿಯಾಗಿದೆ ಎಂದರು. ಸಾನ್ನಿಧ್ಯ ವಹಿಸಿದ್ದ ಮುನವಳ್ಳಿಯ ಸಂತಶ್ರೇಷ್ಠ ಜ್ಞಾನೇಶ್ವರ ತೇಲ್ಕರ್, ಉಗರಗೋಳದ ಸಂತಶ್ರೇಷ್ಠ ಶೇಷಪ್ಪ ಕೊಪ್ಪದ, ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಿದ್ದನಗೌಡ ಗೂಡರಾಶಿ, ಪುಂಡಲೀಕ ಕೋಳಕರ, ಯಲ್ಲಪ್ಪ ಭೂವಿ, ಗೋವಿಂದಗೌಡ ತಿಪ್ಪರಾಶಿ ಸೇರಿದಂತೆ ವಿವಿಧ ಗಣ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಉಪಸ್ಥಿತರಿದ್ದರು. ಉಗರಗೋಳ ಗ್ರಾಮದಲ್ಲಿ ತುಳಸಿ ಗಿಡಕ್ಕೆ ನೀರು ಹಾಕುವ ಮೂಲಕ ಶಾಸಕ ವಿಶ್ವಾಸ ವೈದ್ಯ ಅವರು ರುಕ್ಮಿಣಿ ಪಾಂಡುರಂಗ ದಿಂಡಿ ಉತ್ಸವಕ್ಕೆ ಚಾಲನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 