ಎಸ್ಪಿಯಾಗಿ ದೀಪನ್ ಅಧಿಕಾರ ಸ್ವೀಕಾರ
Deepan takes charge as SP
ಕಾರವಾರ 16: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ದೀಪನ್ ಎಂ.ಎನ್. ಅಧಿಕಾರ ವಹಿಸಿಕೊಂಡರು.ಜಿಲ್ಲೆಗೆ ಆಗಮಿಸಿದ ನೂತನ ಎಸ್.ಪಿ. ದೀಪನ್ ಎಂ.ಎನ್. ಅವರನ್ನು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಾಂಪ್ರದಾಯಿಕ ಗೌರವಗಳೊಂದಿಗೆ ಸ್ವಾಗತಿಸಲಾಯಿತು.
ಸಿಬ್ಬಂದಿಯಿಂದ ಗೌರವ ರಕ್ಷೆ ಸ್ವೀಕರಿಸಿದ ನಂತರ, ಹಿರಿಯ ಅಧಿಕಾರಿಗಳು ಹೂಗುಚ್ಛ ನೀಡಿ ಅವರನ್ನು ಬರಮಾಡಿಕೊಂಡರು. ನಂತರ, ನಿರ್ಗಮಿತ ಎಸ್.ಪಿ. ಎಂ. ನಾರಾಯಣ್ ಅವರು ದೀಪನ್ ಎಂ.ಎನ್. ಅವರಿಗೆ ಜಿಲ್ಲೆಯ ಪರಿಸ್ಥಿತಿ ಮತ್ತು ಆಡಳಿತದ ಕುರಿತು ಮಹತ್ವದ ಮಾಹಿತಿಗಳನ್ನು ನೀಡಿ, ಅಧಿಕಾರವನ್ನು ಹಸ್ತಾಂತರಿಸಿದರು. ಅಗತ್ಯ ಕಡತಗಳಿಗೆ ಸಹಿ ಮಾಡುವ ಮೂಲಕ ದೀಪನ್ ಎಂ.ಎನ್. ಅಧಿಕೃತವಾಗಿ ತಮ್ಮ ಹೊಸ ಕರ್ತವ್ಯಕ್ಕೆ ಚಾಲನೆ ನೀಡಿದರು.ಜಿಲ್ಲೆಯ ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ಎಂದು ಇದೇ ವೇಳೆ ಮಾಧ್ಯಮಗಳಿಗೆ ಹೇಳಿದರು .
ಎಲ್ಲಾ ಇಲಾಖೆಯ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡುವುದಾಗಿ ನುಡಿದರು. ಮಾಧ್ಯಮಗಳ ಸಹಕಾರವನ್ನು ಅವರು ಕೋರಿದರು. ಮೂಲತಃ ಬೆಂಗಳೂರಿನವನು ಎಂದು ಅವರು ಹೇಳಿಕೊಂಡರು .ಇದೇ ಸಂದರ್ಭದಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯ ನಿರ್ವಹಿಸಿ, ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಗೆ ವರ್ಗಾವಣೆ ಆದ ಎಸ್.ಪಿ. ನಾರಾಯಣ . ಎಂ. ಅವರಿಗೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಹೂಮಳೆಗರೆದು ಬೀಳ್ಕೊಟ್ಟರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 