ಅಜ್ಞಾನದ ಕತ್ತಲೆಯಿಂದ ಬೆಳಕಿನಕಡೆಗೆ ಕರೆತರುವುದೇ ದೀಪೋತ್ಸವ
Deepotsava is the festival of lights that brings us from the darkness of ignorance to the light
ಶಿಗ್ಗಾವಿ 02: ಸಧ್ಬಕ್ತರನ್ನು ಅಜ್ಞಾನದ ಕತ್ತಲೆಯಿಂದ ಬೆಳಕಿನಕಡೆಗೆ ಕರೆತರುವುದೇ ಕಾರ್ತಿಕ ಮಾಸದ ದೀಪೋತ್ಸವ ಎಂದು ಗಂಜೀಗಟ್ಟಿ ಡಾ ವೈಜನಾಥ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ನಿಮಿತ್ಯ ದೀಪೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕಾರ್ತಿಕ ಮಾಸದಲ್ಲಿ ದೀಪ ಹಚ್ಚುವದರಿಂದ ಪ್ರತಿಯೊಬ್ಬರಲ್ಲಿರುವ ಕಲ್ಮಶ ಗುಣಗಳು ನಾಶವಾಗಿ ಚೈತನ್ಯ ಭರಿತ ಜೀವನ ನಿರ್ವಹಣೆ ಮಾಡಲು ಸಹಕಾರಿಯಾಗುತ್ತದೆ ಅಲ್ಲದೇ ಮುಂದಿನ ದಿನಗಳಲ್ಲಿ ಈ ದೇವಸ್ಥಾನ ಉತ್ತರೋತ್ತರ ಅಭಿವೃದ್ಧಿಯಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು, ಯುವ ಮುಖಂಡ ಭರತ ಬೊಮ್ಮಾಯಿ, ನಿಂಗಪ್ಪ ಇಂಗಳಗಿ, ಸಂಗಪ್ಪ ಕಂಕಣವಾಡ, ನಿಂಗಪ್ಪ ಯಲವಿಗಿ, ನಿಂಗಪ್ಪ ಯಲಿಗಾರ, ರಾಜಣ್ಣಾ ಗಾಣಗೇರ, ಸುರೇಶ ಯಲಿಗಾರ, ಮಂಜುನಾಥ ಬ್ಯಾಹಟ್ಟಿ, ಮಂಜುನಾಥ ಕಟ್ಟಿಮನಿ, ಮಹಾಂತೇಶ ಕಂಕನವಾಡ, ಮಲ್ಲೇಶಪ್ಪ ಅತ್ತಿಗೇರಿ, ತಿರಕಪ್ಪ ಅಂದಲಗಿ, ಸೋಮಣ್ಣ ಮತ್ತೂರ, ಮಹಾಂತೇಶ ಯಲಿಗಾರ, ಶಂಕರಗೌಡ ಪಾಟೀಲ ಸೇರಿದಂತೆ ಮೈಲಾರಲಿಂಗೇಶ್ವರ ಸಮಿತಿ ಸರ್ವ ಸದಸ್ಯರು ಹಾಗೂ ಪಟ್ಟಣದ ಸಧ್ಬಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 