ಜಿಂಕೆಯ ಮಾಂಸ, ಕೊಂಬು ಹಾಗೂ 2 ಏರ್‌ಗನ್ ವಶಕ್ಕೆ
Deer meat, antlers and 2 airguns seized
ಕಾರವಾರ 19: ಕಾಡುಪ್ರಾಣಿ ಹತ್ಯೆಯ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು , ಭಟ್ಕಳದ ಹುರುಳಿಸಾಲ ಪ್ರದೇಶದ ಮನೆಯೊಂದರ ಮೇಲೆ ದಾಳಿ ನಡೆಸಿ, 21 ಕೆ.ಜಿ. ಮಾಂಸ, ಜಿಂಕೆ ಕೊಂಬು ಹಾಗೂ 2 ಏರ್‌ಗನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.ಜಾಫರ್ ಬ್ರಹ್ಮಾವರ್ ಕಾಡಿನಲ್ಲಿ ಪ್ರಾಣಿಯನ್ನು ಹತ್ಯೆ ಮಾಡಿ, ಮಾಂಸವನ್ನು ಮನೆಯ ಪಕ್ಕದಲ್ಲೇ ಬೇರಿ್ಡಸುತ್ತಿದ್ದ ಎನ್ನಲಾಗಿದೆ . ಪ್ರಾಣಿಯ ಇತರೆ ಅವಶೇಷಗಳನ್ನು ಮನೆಯ ಪಕ್ಕದಲ್ಲಿದ್ದ, ಪಾಳುಬಿದ್ದ ಬಾವಿಗೆ ಎಸೆಯುತ್ತಿದ್ದ ಎನ್ನಲಾಗಿದೆ.ಈ ಹಿನ್ನೆಲೆ ಅರಣ್ಯಾಧಿಕಾರಿಗಳು, ಭಟ್ಕಳ ಪೊಲೀಸರ ಸಹಾಯದಿಂದ ಮನೆ ಒಳಗೆ ಶೋಧಕ್ಕೆ ಮುಂದಾದರು . ಪ್ರಾರಂಭದಲ್ಲಿ ಆರೋಪಿ ಮನೆಯವರು ಬಾಗಿಲು ತೆರೆಯಲು ವಿರೋಧ ವ್ಯಕ್ತಪಡಿಸಿದರು. ಆರೋಪಿ ಪರಾರಿ :ಸುಮಾರು ಆರು ಗಂಟೆಗಳ ಕಾಲ ಅಧಿಕಾರಿಗಳು ಕಾದ ಬಳಿಕ ಆರೋಪಿ ಕುಟುಂಬಸ್ಥರು ಬಾಗಿಲು ತೆರೆದರು.
ಈ ವೇಳೆ ನಡೆದ ಪರೀಶೀಲನೆಯಲ್ಲಿ ಫ್ರಿಡ್ಜ್‌ನಲ್ಲಿ ಸಂಗ್ರಹಿಸಿದ್ದ 21 ಕೆ.ಜಿ. ಮಾಂಸ, ಜಿಂಕೆಯ ಕೊಂಬು ಹಾಗೂ ಎರಡು ಏರ್‌ಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ, ಅಧಿಕಾರಿಗಳು ಬಾವಿಯಲ್ಲಿದ್ದ ಅವಶೇಷಗಳನ್ನು ಹೊರತೆಗೆದು ಪರೀಶೀಲಿಸಿದ್ದಾರೆ.ಮನೆಯಲ್ಲಿ ಸಿಕ್ಕಿದ ಮಾಂಸ ಮೇಲ್ನೋಟಕ್ಕೆ ಕಾಡುಕೋಣದ ಮಾಂಸವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಮಾಂಸದ ನಮೂನೆಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆರೋಪಿ ತಲೆಮರೆಸಿಕೊಂಡಿದ್ದು, ಅಧಿಕಾರಿಗಳು ಆತನಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಆರ್.ಎಫ್.ಒ. ವಿಶ್ವನಾಥ, ಡಿ.ಆರ್.ಒ.ಎಫ್ . ಗಳಾದ ಮಾರುತಿ, ಸಂದೀಪ್ ಸೇರಿದಂತೆ ಧನಂಜಯ ಮೊಗೇರ, ಭಟ್ಕಳ ನಗರ ಠಾಣೆ ಸಿಪಿಐ ದಿವಾಕರ , ಗ್ರಾಮೀಣ ಠಾಣೆ ಪಿಎಸ್‌ಐ ಮಲ್ಲಿಕಾರ್ಜುನ, ಪೊಲೀಸ್ ಕಾನ್ಸಸ್ಟೇಬಲ್ಸ ಗಳೂ ಪಾಲ್ಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 