ಗ್ಯಾರಂಟಿ ಯೋಜನೆಗಳ ಜಾರಿಗೆ ವಿಳಂಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
Delay in implementing guarantee schemes: BJP lashes out at Congress government
ರಾಣೆಬೆನ್ನೂರು, ಆ.6: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾರಿ ಹಾಗೂ ಅಭಿವೃದ್ಧಿ ಕಾಮಗಾರಿಗಳ ವಿಳಂಬವನ್ನು ಖಂಡಿಸಿ ಬಿಜೆಪಿ ಮುಖಂಡರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ದಾರಿತಪ್ಪಿಸುತ್ತಿದ್ದು, ಸಾಮಾನ್ಯ ಜನರ ದೈನಂದಿನ ಬದುಕು ಸಂಕಷ್ಟಕರವಾಗಿದೆ ಎಂದು ಆರೋಪಿಸಿದರು. ರೈತರ ಹಿತಕ್ಕಿಂತ ಅಧಿಕಾರದ ಹಿತಾಸಕ್ತಿಗೆ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ ಎಂದು ಟೀಕಿಸಿದರು.
ತಾಲ್ಲೂಕುಗಳಲ್ಲಿ ಘೋಷಿಸಲಾದ ಹಲವು ಯೋಜನೆಗಳು ಇನ್ನೂ ಪೂರ್ಣಗೊಂಡಿಲ್ಲ. ರೈತರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅರುಣಕುಮಾರ ಪೂಜಾರ, ರಾಣೆಬೆನ್ನೂರು ಹಾಗೂ ಚಳಗೇರಿ ಕೆರೆ ಯೋಜನೆ ಘೋಷಣೆಯಾಗಿ ಹಲವು ವರ್ಷಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಆರೋಪಿಸಿದರು. ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಎರಡು ಬಾರಿ ಶಂಕುಸ್ಥಾಪನೆ ನಡೆಸಿದ್ದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ತಕ್ಷಣ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಿದ್ದಪ್ಪ ಚಿಕ್ಕಬಿದರಿ ಮಾತನಾಡಿ, ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿ ಕಾಮಗಾರಿಗಳು ನೆನೆಗುದಿಗೆ ಬಿದ್ದಿದ್ದು, ಪ್ರಚಾರಕ್ಕಷ್ಟೇ ಸರ್ಕಾರ ಸೀಮಿತವಾಗಿದೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ನ್ಯಾಯವಾದಿ ಕೇರೋಡಿ, ಡಾ. ಬಸವರಾಜ ಕೇಳಗಾರ, ಡಿ.ಎಂ. ಸಾಲಿ, ಕೆ. ಶಿವಲಿಂಗಪ್ಪ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.
ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಸುಭಾಷ ಸಿರಿಗೇರಿ, ಗ್ರಾಮೀಣ ಘಟಕದ ಅಧ್ಯಕ್ಷ ಮಂಜು ಕಾಟಿ, ಪರಮೇಶಪ್ಪ ಗೋಳಣ್ಣವರ, ರಮೇಶ್ ನಾಯಕ್, ಪ್ರಭುಸ್ವಾಮಿ ಕರ್ಜಗಿ ಮಠ, ನಿಂಗರಾಜ ಕೋಡಿಹಳ್ಳಿ, ಪವನ್ ಮಲ್ಲಾಡದ, ಸುಜಾತಮ್ಮ ಆರಾಧ್ಯ ಮಠ, ಚೆನ್ನಮ್ಮ ಗುರುಪಾದ ದೇವರ ಮಠ, ಅಕ್ಷತಾ ಮಾಳಗಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಹಿರೇಕೆರೂರು, ರಟ್ಟಿಹಳ್ಳಿ, ಮಾಸೂರು, ರಾಣೆಬೆನ್ನೂರು ಭಾಗಗಳ ರೈತರು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 