ಮತದಾರ ಪಟ್ಟಿಯ ಪ್ರಗತಿ ಪರೀಶೀಲನ ಸಭೆ
ಕೊಪ್ಪಳ 25: ಮರಣ ಹೊಂದಿರುವ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತೆ ಬೆಂಗಳೂರು ಮುಖ್ಯ ಚುನಾವಣಾ ಅಧಿಕಾರಿಗಳ ಕಚೇರಿಯ ಸೀನಿಯರ್ ಕನ್ಸಲ್ಟೆಂಟ್ ಬಿ.ಎಸ್ ಹಿರೇಮಠ ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿಯ ಕೆಸ್-1 ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ನಡೆದ ಮತದಾರ ಪಟ್ಟಿ ಪ್ರಗತಿ ಪರೀಶೀಲನೆ ನಡೆಸಿದರು. ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಯಲ್ಲಿ ಮರಣ ಹೊಂದಿರುವ ಮತದಾರರ ಹೆಸರು ತೆಗೆದು ಹಾಕಿರುವ ಕುರಿತು ಪರೀಶೀಲಿಸಿದರು ಹಾಗೂ ಜಿಲ್ಲಾ ಮಟ್ಟದ ಚುನಾವಣಾ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದರು.
ಈ ಸಭೆಯಲ್ಲಿ ಕೊಪ್ಪಳ ಅಪಾರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಮುಖ್ಯ ಯೋಜನಾಧಿಕಾರಿ ಮಂಜುನಾಥ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಗಳ ತಹಶಿಲ್ದಾರರು, ಇತರೆ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತಿತರಿದ್ದರು.