ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಡುಗಡೆ: ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ, ಸಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರಕ್ಕೆ ಕೊಟ್ಟ ಕಪಾಳ ಮೋಕ್ಷವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಡುಗಡೆ ಕುರಿತು ಪ್ರತಿಕ್ರಿಯಿಸಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ. ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದಿದ್ದಾರೆ.