ನವದೆಹಲಿ, ಜೂನ್ ೮, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅಸ್ವಸ್ಥಗೊಂಡಿದ್ದಾರೆ. ಜ್ವರ, ಗಂಟಲು ನೋವು ಕಾಣಿಸಿಕೊಂಡಿರುವುದರಿಂದ ಅವರು ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಹೋಂ ಕ್ವಾರಂಟೈನ್ ಗೆ ಒಳಗಾಗಿರುವ ಅವರು, ತಮ್ಮ ಎಲ್ಲ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದಾರೆ. ನಾಳೆ ಅವರು ಕೊರೊನಾ ಪರೀಕ್ಷೆಗೆ ಒಳಗಾಗಲಿದ್ದಾರೆ. ಕೇಜ್ರೀವಾಲ್ ಬಹಳ ವರ್ಷಗಳಿಂದ ತೀವ್ರ ರೀತಿಯ ಆಸ್ತಮಾದಿಂದ ಬಳಲುತ್ತಿದ್ದಾರೆ. ಆಸ್ತಮಾಗೆ ಔಷಧಿ ತೆಗೆದುಕೊಳ್ಳುತ್ತಿದ್ದಾರೆ.