ಕ್ರೌಡ್ ಫಂಡಿಂಗ್ ಅಭಿಯಾನ ಆರಂಭಿಸಿದ ದೆಹಲಿ ಮುಖ್ಯಮಂತ್ರಿ ಆತಿಶಿ
Delhi Chief Minister Atishi started the crowd funding campaign
ನವದೆಹಲಿ 12: ವಿಧಾನಸಭಾ ಚುನಾವಣೆಗಾಗಿ ₹40 ಲಕ್ಷ ಸಂಗ್ರಹಿಸಲು ಕ್ರೌಡ್ ಫಂಡಿಂಗ್ ಅಭಿಯಾನವನ್ನು ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ಇಂದು ಆರಂಭಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಪಯಣದುದ್ದಕ್ಕೂ, ದೊಡ್ಡ ಉದ್ಯಮಿಗಳಿಗಿಂತ ಸಾಮಾನ್ಯ ನಾಗರಿಕರ ಬೆಂಬಲವೇ ಪ್ರಚಾರದ ಮೂಲಾಧಾರವಾಗಿದೆ ಎಂದು ಹೇಳಿದ್ದಾರೆ.
2013ರಲ್ಲಿ ನಾವು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ, ಜನರಿಂದ ದೇಣಿಗೆಗಳನ್ನು ಪಡೆಯಲು ಮನೆ-ಮನೆಗೆ ಹೋಗಿದ್ದೆವು. ಬೀದಿಗಳಲ್ಲೇ ಸಭೆಗಳನ್ನು ನಡೆಸುತ್ತಿದ್ದೆವು. ಸಭೆ ನಂತರ ಒಂದು ಬಟ್ಟೆಯನ್ನು ಹರಡುತ್ತಿದ್ದೆವು. ಜನರು ₹10, ₹50, ₹100ರಂತೆ ತಮ್ಮ ಕೈಲಾದಷ್ಟು ಕೊಡುಗೆ ನೀಡುತ್ತಿದ್ದರು. ಯಾವುದೇ ಕಾರ್ಪೊರೇಟ್ ಅಥವಾ ವ್ಯಾಪಾರ ಸಂಬಂಧಗಳಿಂದ ಮುಕ್ತವಾಗಿ ಪ್ರಾಮಾಣಿಕ ಪ್ರಚಾರವನ್ನು ನಡೆಸಲು ಈ ವಿಧಾನವು ನಮಗೆ ನೆರವಾಗುತ್ತದೆ’ ಎಂದು ತಿಳಿಸಿದ್ದಾರೆ.
ಜನರಿಂದ ಸಣ್ಣ ದೇಣಿಗೆಗಳು ರಾಜಕೀಯಕ್ಕೆ ಪಕ್ಷದ ಪ್ರಾಮಾಣಿಕ ವಿಧಾನವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ, ಕಾರ್ಪೊರೇಟ್ ದೇಣಿಗೆಗಳನ್ನು ಅವಲಂಬಿಸಿರುವ ಮತ್ತು ವ್ಯಾಪಾರದ ಹಿತಾಸಕ್ತಿಗಳನ್ನು ಹೊಂದಿರುವ ಇತರ ಪಕ್ಷಗಳಿಗಿಂತ ನಾವು ಭಿನ್ನವಾಗಿದ್ದೇವೆ ಎಂದು ಆತಿಶಿ ಅವರು ಆಮ್ ಆದ್ಮಿ ಪಕ್ಷದ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಗಾಗಿ ಕ್ರೌಡ್ ಫಂಡಿಂಗ್ ಅಭಿಯಾನವನ್ನು ಆರಂಭಿಸಲಾಗಿದೆ. ಇದರೊಂದಿಗೆ ₹40 ಲಕ್ಷ ಸಂಗ್ರಹಿಸುವ ಗುರಿಯನ್ನು ಹೊಂದಿದ್ದೇವೆ. ಚುನಾವಣಾ ಪ್ರಚಾರಕ್ಕೆ ಹಣದ ಅಗತ್ಯತೆ ಇರುವುದರಿಂದ ಸಾರ್ವಜನಿಕರು ತಮ್ಮ ಕೈಲಾದಷ್ಟು ಕೊಡುಗೆ ನೀಡುವಂತೆ ಮನವಿ ಮಾಡಿದ್ದಾರೆ.
ಆಸಕ್ತರು atishi.aamaadmiparty.org ನಲ್ಲಿ ಲಗತ್ತಿಸುರುವ ಲಿಂಕ್ ಮೂಲಕ ದೇಣಿಗೆ ನೀಡಬಹುದು ಎಂದು ಆತಿಶಿ ಹೇಳಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 