ಪಾಟ್ನಾ, ಜ 10 , ಈ ಬಾರಿ ದೆಹಲಿ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಿರಲಿದ್ದು,ಎನ್ಡಿಎ ಪಾಲುದಾರ ಪಕ್ಷಗಳಾದ ಲೋಕಜನಶಕ್ತಿ ಪಕ್ಷ-ಎಲ್ಜೆಪಿ ಹಾಗೂ ಜನತಾ ದಳ (ಯು) –ಜೆಡಿಯು ಸ್ಪರ್ಧೆಗೆ ಮುಂದಾಗಿದ್ದು, ರೋಚಕ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ಜತೆಗೆ ಬಿಜೆಪಿಗೆ ದೆಹಲಿ ಗೆಲುವು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಜನತಾದಳ (ಯು) ಮತ್ತು ಲೋಕ ಜನಶಕ್ತಿ ಪಕ್ಷದ (ಎಲ್ಜೆಪಿ) ತಮ್ಮ ನೆಲೆಯನ್ನು ವಿಸ್ತರಿಸುವ ಉದ್ದೇಶದಿಂದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿವೆ. ಈ ನಿಟ್ಟಿನಲ್ಲಿ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, “ಜೆಡಿಯು ಬಿಹಾರದಲ್ಲಿ ಮಾತ್ರ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಉಳಿದಂತೆ ಯಾವುದೇ ರಾಜ್ಯದ ಚುನಾವಣೆಯಲ್ಲಿ ಸ್ಪರ್ಧಿಸಲು ಮುಕ್ತವಾಗಿದೆ ಎಂದಿದ್ದಾರೆ. ಜೆಡಿ (ಯು) ಇತ್ತೀಚೆಗೆ ಜಾರ್ಖಂಡ್ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲೂ ಸ್ಪರ್ಧಿಸಿತ್ತು. ಇನ್ನು ಚಿರಾಗ್ ಪಾಸ್ವಾನ್ ಅವರು ತಮ್ಮ ತಂದೆ ಮತ್ತು ಎಲ್ಜಿಪಿಯ ಪರಂಪರೆ ಮುಂದುವರಿಸಿದ್ದು, ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಇದಕ್ಕೆ ಪಕ್ಷದ ಮುಖ್ಯಸ್ಥ ರಾಮ್ವಿಲಾಸ್ ಪಾಸ್ವಾನ್ ಗ್ರೀನ್ ಸಿಗ್ನಲ್ ಸಿಕ್ಕಿದೆ.