ಡಿಸಿಎಂ ಶಿವಕುಮಾರ್ ಗೆ ದಿಲ್ಲಿ ಪೊಲೀಸ್ ನೋಟಿಸ್
Delhi Police notice to DCM Shivakumar
ನವದೆಹಲಿ: ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (ಇಓಘ) ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿದೆ. ಯಂಗ್ ಇಂಡಿಯನ್ (ಙಋ) ಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದ ವಿವರವಾದ ಹಣಕಾಸು ಮತ್ತು ವಹಿವಾಟು ದಾಖಲೆಗಳನ್ನು ಒದಗಿಸುವಂತೆ ಕೇಳಿದೆ. ನವೆಂಬರ್ 29 ರಂದು ಹೊರಡಿಸಲಾದ ನೋಟಿಸ್ನಲ್ಲಿ ಶಿವಕುಮಾರ್ ಡಿಸೆಂಬರ್ 19 ರೊಳಗೆ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚಿಸಿದೆ.
ಆರ್ಥಿಕ ಅಪರಾಧ ವಿಭಾಗ ನೀಡಿರುವ ನೋಟಿಸ್ ನಲ್ಲಿ, ಡಿಕೆ ಶಿವಕುಮಾರ್ ಅವರ ವೈಯಕ್ತಿಕ ಹಿನ್ನೆಲೆ, ಕಾಂಗ್ರೆಸ್ ಪಕ್ಷದ ಜತೆಗಿನ ಸಂಬಂಧ ಹಾಗೂ ಯಂಗ್ ಇಂಡಿಯಾಕ್ಕೆ ವರ್ಗಾವಣೆ ಮಾಡಿರುವ ಹಣಕಾಸು ಮೂಲಗಳ ಬಗ್ಗೆ ಮಾಹಿತಿ ನೀಡುವಂತೆ ಕೋರಿದೆ.
ನೋಟಿಸ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇದೊಂದು ಆಘಾತಕಾರಿ ಬೆಳವಣಿಗೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ವೇಳೆ ನಾನು ಜಾರಿ ನಿರ್ದೇಶನಾಲಯಕ್ಕೆ ಈಗಾಗಲೇ ಎಲ್ಲಾ ಮಾಹಿತಿಯನ್ನು ಒದಗಿಸಿದ್ದೇನೆ. ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ಯಂಗ್ ಇಂಡಿಯಾ ನಮ್ಮ ಸಂಸ್ಥೆಯಾಗಿದೆ. ನಾವು ಕಾಂಗ್ರೆಸ್ ಪಕ್ಷದವರಾಗಿ ಸಂಸ್ಥೆಯನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಕೇಂದ್ರ ಹಾಗೂ ಆರ್ಥಿಕ ಅಪರಾಧ ವಿಭಾಗ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಗೆ ನೋಟಿಸ್ ನೀಡುವ ಮೂಲಕ ಕಿರುಕುಳ ನೀಡುವ ದುರುದ್ದೇಶ ಹೊಂದಿದೆ ಎಂದು” ಆರೋಪಿಸಿದ್ದಾರೆ.
ನಾವು ಈ ವಿಷಯದ ಬಗ್ಗೆ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸುತ್ತೇವೆ. ಇದೊಂದು ಕಿರುಕುಳವಾಗಿದೆ. ಅದು ನಮ್ಮ ಹಣ. ನಮ್ಮ ಹಣಕ್ಕೆ ತೆರಿಗೆ ಪಾವತಿಸಿದ್ದೇವೆ. ಇದರಲ್ಲಿ ಯಾವುದೇ ಅಕ್ರಮಗಳಿಲ್ಲ. ಪಿಎಂಎಲ್ ಎ ಪ್ರಕರಣ ಮುಗಿದಿದ್ದು, ಈಗಾಗಲೇ ಆರೋಪಪಟ್ಟಿ ಸಲ್ಲಿಸಿದೆ. ಈ ತನಿಖಾ ಸಂಸ್ಥೆಗಳು ಇದಕ್ಕಿಂತ ಹೆಚ್ಚಿನದ್ದೇನನ್ನು ಮಾಡಲು ಸಾಧ್ಯ? ಹೆಚ್ಚೆಂದರೆ ಕಾಂಗ್ರೆಸ್ ಮುಖಂಡರಿಗೆ ಕಿರುಕುಳ ನೀಡಬಹುದು. ಈ ಮೂಲಕ ತಪ್ಪು ಗ್ರಹಿಕೆ ಮೂಡಿಸಲು ಪ್ರಯತ್ನಿಸುತ್ತಿರುವುದಾಗಿ ಡಿಕೆಶಿ ದೂರಿದರ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 